CONNECT WITH US  

"ಸುಮಲತಾರಿಗೆ ತಕ್ಕ ಮಗ ಅಜೇಯ್‌': ಮಾಸ್ ಟ್ರೈಲರ್ ವೀಕ್ಷಿಸಿ

ಶಶಾಂಕ್‌ ನಿರ್ದೇಶನದ "ತಾಯಿಗೆ ತಕ್ಕ ಮಗ' ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಮಾಸ್ ಲುಕ್‍ನಲ್ಲಿ ಅಜೇಯ್‌ ರಾವ್‌ ಮಿಂಚಿದ್ದಾರೆ. ಈಗಾಗಲೇ ಸಂಪೂರ್ಣ ಚಿತ್ರೀಕರಣ ಮುಗಿಸಿರುವ "ತಾಯಿಗೆ ತಕ್ಕ ಮಗ' ಅಕ್ಟೋಬರ್‌ನಲ್ಲಿ ತೆರೆಗೆ ಬರಲಿದೆ. ಚಿತ್ರವು ಎರಡು ಟ್ರ್ಯಾಕ್‌ನಲ್ಲಿ ಸಾಗುವ ಕಥೆಯಾಗಿದ್ದು, ತಾಯಿ-ಮಗನ ಎಪಿಸೋಡ್‌ ಒಂದು ಕಡೆಯಾದರೆ, ಹೀರೋ ಲವ್‌ ಎಪಿಸೋಡ್‌ ಇನ್ನೊಂದು ಕಡೆ ಸಾಗುತ್ತದೆಯಂತೆ. "ಚಿತ್ರದಲ್ಲಿ ತಾಯಿ-ಮಗನ ಒಂದು ಕಥೆಯಾದರೆ, ಅವರನ್ನು ವಿರೋಧಿಸುವ ತಂದೆ-ಮಗನ ಮತ್ತೊಂದು ಕಥೆ ಇದೆ. ಇವರ ನಡುವೆ ಪೇಚಿಗೆ ಸಿಲುಕುವ ಅಪ್ಪ-ಮಗಳು ಇನ್ನೊಂದು ಕಡೆ'ಯಲ್ಲಿ ಕಥೆ ಸಾಗುತ್ತದೆ. ಚಿತ್ರದಲ್ಲಿ ಅಜೇಯ್‌ ರಾವ್‌ ಎದುರಿಗೆ ನಾಯಕಿಯಾಗಿ ಆಶಿಕಾ ನಟಿಸಿದ್ದು, ಸುಮಲತಾ ಅಂಬರೀಶ್‌ ತಾಯಿಯಾಗಿ ನಟಿಸಿದ್ದಾರೆ. ಈ ಚಿತ್ರವನ್ನು ಶಶಾಂಕ್‌ ನಿರ್ಮಿಸಿ, ನಿರ್ದೇಶಿಸಿದ್ದಾರೆ. ಅಲ್ಲದೇ ಚಿತ್ರಕ್ಕೆ ಕಿಚ್ಚ ಸುದೀಪ ಧ್ವನಿ ನೀಡಿದ್ದು, ಈ ಮೂಲಕ ಅಜೇಯ್‌ ರಾವ್‌ ಸಿನಿಮಾಕ್ಕೆ ಸುದೀಪ್‌ ಸಾಥ್‌ ನೀಡಿದ್ದಾರೆ. ಚಿತ್ರದ ಮಾಸ್ ಟ್ರೈಲರ್ ವೀಕ್ಷಿಸಿ.

Back to Top