ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತ್ಯಲೋಕ ನಮ್ಮ ಹೆಮ್ಮೆ: ಅಂಬಾತನಯ ಮುದ್ರಾಡಿ

Team Udayavani, Feb 28, 2020, 10:41 PM IST

jnyanapita

ಕಡಬ: ಭಾಷಾ ಬಾಂಧವ್ಯ ನಮ್ಮ ಬದುಕಿನ ಬುನಾದಿ. 8 ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತ್ಯಲೋಕ ನಮ್ಮ ಹೆಮ್ಮೆ ಎಂದು ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಅವರು ಹೇಳಿದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕಡಬ ತಾಲೂಕು ಘಟಕದ ವತಿಯಿಂದ ರಾಮಕುಂಜದ ವಿಶ್ವೇಶ ನಗರದ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಅರ್ಬಿ ರಾಜಮ್ಮ ಮತ್ತು ಶ್ರೀನಿವಾಸ ಭಟ್ಟ ಸಮ್ಮೇಳನಾಂಗಣದ ಡಾ| ಎಂ. ಚಿದಾನಂದ ಮೂರ್ತಿ ಸಭಾಂಗಣದ ವಿಶ್ವೇಶತೀರ್ಥ ವೇದಿಕೆಯಲ್ಲಿ ಕಡಬ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮೆಲ್ಲರ ಜವಾಬ್ದಾರಿ
ನಾವು ಎಲ್ಲ ಭಾಷೆಗಳನ್ನು ಪ್ರೀತಿಸಿದವರು. ನಮಗೆ ಭಾಷಾಭಿಮಾನವಿದೆಯೇ ಹೊರತು ದುರಭಿಮಾನವಿಲ್ಲ. ಯಾವ ಭಾಷೆಯನ್ನು ಕಲಿತರೂ ಕನ್ನಡವನ್ನು ಮರೆಯದಿರಿ. ಕನ್ನಡ ಭಾಷೆಯನ್ನು ಹೆಚ್ಚೆಚ್ಚು ಬಳಸುವ ಮೂಲಕ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದು. ಸಾಹಿತ್ಯ ಸಮ್ಮೇಳನಗಳು ಜ್ಞಾನ ಮತ್ತು ಹೃದಯ ಸಾಗರದ ಮಂಥನವಾಗಿ ಅಮೃತ ಉಕ್ಕುವಂತಹ ಸಾರಸ್ವತ ಯಜ್ಞವಾಗಬೇಕು ಎಂದರು. ಪ್ರದರ್ಶನ ಮಳಿಗೆ ಉದ್ಘಾಟನೆ ಪುಸ್ತಕ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿ, ವೇದಿಕೆಯಲ್ಲಿ ಕಲ್ಪವೃಕ್ಷಕ್ಕೆ ನೀರೆರೆದು ಆಶೀರ್ವಚನ ನೀಡಿದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಸಾಹಿತ್ಯ ನಮ್ಮ ನಾಡಿನ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಉಳಿಸುವ ಮಾಧ್ಯಮಗಳಾಗಬೇಕು. ಕನ್ನಡದ ಬಗೆಗಿನ ಪ್ರೀತಿ ನಿತ್ಯ ನಿರಂತರವಾಗಿರಬೇಕು. ಹೆತ್ತವರು ಮತ್ತು ಶಿಕ್ಷಕರು ಮಾರ್ಗದರ್ಶನ ನೀಡಿದಾಗ ಮಕ್ಕಳಿಗೆ ಸಾಹಿತ್ಯ ಮತ್ತು ಭಾಷೆಯ ಬಗೆಗೆ ಒಲವು ಮೂಡಲು ಸಾಧ್ಯ ಎಂದು ಅವರು ನುಡಿದರು.

ಕಸಾಪ ದ.ಕ. ಜಿಲ್ಲಾಧ್ಯಕ್ಷ ಎಸ್‌.ಪ್ರದೀಪ್‌ಕುಮಾರ್‌ ಕಲ್ಕೂರ ಆಶಯ ಭಾಷಣ ಮಾಡಿದರು. ಸುಳ್ಯ ಶಾಸಕ ಎಸ್‌.ಅಂಗಾರ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಪ್ರಾಚ್ಯವಸ್ತು ಪ್ರದರ್ಶನವನ್ನು ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್‌, ಕಲಾ ಪ್ರದರ್ಶನವನ್ನು ಸಾಹಿತಿ ವಿ.ಬಿ.ಅರ್ತಿಕಜೆ, ವಿಜ್ಞಾನ ಪ್ರದರ್ಶನವನ್ನು ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಅಧ್ಯಕ್ಷ ಇ. ಕೃಷ್ಣಮೂರ್ತಿ ಕಲ್ಲೇರಿ ಉದ್ಘಾಟಿಸಿದರು. ಕಡಬ ತಹಶೀಲ್ದಾರ್‌ ಜಾನ್‌ ಪ್ರಕಾಶ್‌ ರೋಡ್ರಿಗಸ್‌, ಜಿ.ಪಂ. ಸದಸ್ಯ ಸರ್ವೋತ್ತಮ ಗೌಡ, ತಾ.ಪಂ. ಸದಸ್ಯರಾದ ಜಯಂತಿ ಆರ್‌. ಗೌಡ, ತೇಜಸ್ವಿನಿ ಕಟ್ಟಪುಣಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಸಿ. ಮುಖ್ಯಅತಿಥಿಗಳಾಗಿದ್ದರು. ಕಸಾಪ ಜಿಲ್ಲಾ ಕೋಶಾಧಿಕಾರಿ ಪೂರ್ಣಿಮಾ ರಾವ್‌ ಪೇಜಾವರ, ಮಂಗಳೂರು ತಾಲೂಕು ಅಧ್ಯಕ್ಷೆ ವಿಜಯಲಕ್ಷ್ಮೀ ಬಿ. ಶೆಟ್ಟಿ, ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಎಂ. ಸತೀಶ್‌ ಭಟ್‌, ಸಂಚಾಲಕ ಪ್ರೊ| ವೇದವ್ಯಾಸ ರಾಮಕುಂಜ, ಗೌರವ ಕಾರ್ಯದರ್ಶಿ ಸತೀಶ್‌ ನಾಯಕ್‌ ಕಡಬ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್‌., ಪ್ರಮುಖರಾದ ಎಸ್‌.ಕೆ. ಆನಂದ್‌ ಮಾಸ್ಟರ್‌ ಪ್ಲಾನರಿ, ಡಾ| ಶ್ರೀಧರ್‌ ಎಚ್‌.ಜಿ. ಪುತ್ತೂರು ಉಪಸ್ಥಿತರಿದ್ದರು.

ಸಮ್ಮೇಳನದ ಸ್ವಾಗತ ಸಮಿತಿ ಕೋಶಾಧಿಕಾರಿ ಕೆ. ಸೇಸಪ್ಪ ರೈ ಸ್ವಾಗತಿಸಿ, ಕಸಾಪ ಕಡಬ ತಾಲೂಕು ಘಟಕದ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು ಪ್ರಸ್ತಾವನೆಗೈದರು. ಸಹ ಸಂಚಾಲಕ ಡಾ| ಸಂಕೀರ್ತ್‌ ಹೆಬ್ಟಾರ್‌ ವಂದಿಸಿದರು. ಸಮ್ಮೇಳನದ ಉದ್ಘಾಟಕರನ್ನು ಬಿ. ಐತಪ್ಪ ನಾಯ್ಕ ಹಾಗೂ ಸಮ್ಮೇಳನಾಧ್ಯಕ್ಷರನ್ನು ಶಿಕ್ಷಕಿ ಮಲ್ಲಿಕಾ ಪರಿಚಯಿಸಿದರು.  ಗಣರಾಜ ಕುಂಬ್ಳೆ ಅವರು ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಮಮತಾ ಕೆ. ಸಹಕರಿಸಿದರು.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.