ಸುಳ್ಯ ತಾ.ಪಂ. ಹೊಸ ಕಟ್ಟಡ ಕಾಮಗಾರಿ ಅಂತಿಮ ಹಂತಕ್ಕೆ

Team Udayavani, Oct 24, 2019, 4:41 AM IST

z-20

ಸುಳ್ಯ: ಸುಮಾರು 2.80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತಾ.ಪಂ. ನೂತನ ಕಟ್ಟಡ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಕೆಲವು ದಿನಗಳಲ್ಲಿ ಉದ್ಘಾಟನೆಗೆ ಸಿದ್ಧಗೊಳ್ಳಲಿದೆ. ಒಂದು ವರ್ಷದ ಹಿಂದೆ ಕಾಮಗಾರಿ ಪ್ರಾರಂಭಗೊಂಡು ವೇಗವಾಗಿ ಪ್ರಗತಿ ಕಂಡಿತ್ತು. ಎಲ್ಲವೂ ನಿರೀಕ್ಷೆಯಂತೆ ಸಾಗಿದರೆ ಒಂದು ತಿಂಗಳೊಳಗೆ ಹೊಸ ಕಟ್ಟಡ ಉಪಯೋಗಕ್ಕೆ ಸಿದ್ಧಗೊಳ್ಳಲಿದೆ.

ಎರಡು ಮಹಡಿಗಳ ಕಟ್ಟಡ
ಹೊಸ ಕಟ್ಟಡ ಎರಡು ಮಹಡಿಗಳನ್ನು ಹೊಂದಿದೆ. ನೆಲ ಅಂತಸ್ತಿನಲ್ಲಿ ತಾ.ಪಂ. ಸಿಇಒ ಕೈಗಾರಿಕಾ ವಿಸ್ತರಣಾಧಿಕಾರಿ, ಅಕ್ಷರ ದಾಸೋಹ, ಎನ್‌ಆರ್‌ಇಜಿ, ವಸತಿ ಯೋಜನೆ ಕೊಠಡಿಗಳು ಇರಲಿವೆ. ಪ್ರಥಮ ಮಹಡಿಯಲ್ಲಿ ಶಾಸಕ, ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸ್ಥಾಯೀ ಸಮಿತಿ ಅಧ್ಯಕ್ಷರಿಗೆ ಪ್ರತ್ಯೇಕ ಕೊಠಡಿ, ತಾ.ಪಂ. ಸರ್ವ ಸದಸ್ಯರಿಗೆ ಒಂದು ಕೊಠಡಿ, 100 ಮಂದಿ ಕುಳಿತುಕೊಳ್ಳಬಹುದಾದ ಮಿನಿ ಸಭಾಂಗಣ ನಿರ್ಮಾಣವಾಗಲಿದೆ. 2ನೇ ಮಹಡಿಯ ಮೇಲೆ ಶೀಟ್‌ ಅಳವಡಿಸಿ 250-300 ಮಂದಿ ಕುಳಿತುಕೊಳ್ಳಬಹುದಾದ ವಿಶಾಲ ಸಭಾಭವನ ನಿರ್ಮಾಣವಾಗಿದೆ.

ಇನ್ನೊಂದು ಕಟ್ಟಡ ತೆರವು?
ಹೊಸ ಕಟ್ಟಡದ ಸನಿಹದಲ್ಲಿರುವ ಹಿಂದುಳಿದ ಕಲ್ಯಾಣ ಇಲಾಖೆ, ಯುವಜನ ಇಲಾಖೆ ಇರುವ ಎರಡು ಮಹಡಿಯ ಕಟ್ಟಡ ತೆರವು ಮಾಡಿ ಪಾರ್ಕಿಂಗ್‌ಗೆ ಸ್ಥಳಾವಕಾಶ ಕಲ್ಪಿಸುವ ಪ್ರಸ್ತಾವನೆ ಕಳುಹಿಸಲಾಗಿದೆ ಎಂಬ ಮಾಹಿತಿ ಇದೆ. ಕೆಲವು ವರ್ಷಗಳ ಹಿಂದೆಯಷ್ಟೇ ಈ ಕಟ್ಟಡ ಕಟ್ಟಲಾಗಿದ್ದು, ಸ್ಥಳಾವಕಾಶದ ನೆಪದಲ್ಲಿ ಜನರ ತೆರಿಗೆ ಹಣದಲ್ಲಿ ನಿರ್ಮಿಸಿದ ಕಟ್ಟಡ ತೆರವು ಸಲ್ಲದು ಎನ್ನುವ ಅಭಿಪ್ರಾಯವೂ ಕೇಳಿ ಬಂದಿದೆ.

ಹಳೆ ಕಟ್ಟಡದ ಇತಿಹಾಸ
1965ರಲ್ಲಿ ಸುಳ್ಯ ತಾಲೂಕಾಗಿ ರೂಪುಗೊಂಡ ಬಳಿಕ 2018ರ ತನಕವೂ ಹೆಂಚು ಹಾಕಿದ ಹಳೆ ಕಟ್ಟಡವೇ ತಾ.ಪಂ. ಕಚೇರಿ ಕೇಂದ್ರವಾಗಿತ್ತು. ಈ ಹಳೆ ಕಟ್ಟಡ ಕೆಡವಿ ಜಿ.ಪಂ. ಕಚೇರಿ ಕಟ್ಟಡ ಮತ್ತು ನಿರ್ವಹಣ ಯೋಜನೆ ಅನುದಾನದಡಿ ಹೊಸ ಕಟ್ಟಡಕ್ಕೆ ಚಾಲನೆ ನೀಡಲಾಗಿತ್ತು. ಹಳೆ ಕಟ್ಟಡದ ಇತಿಹಾಸ ಅವಲೋಕಿಸುವುದಾದರೆ 1965ರಲ್ಲಿ 1966ರಲ್ಲಿ ತಾಲೂಕು ಅಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ ಬಂತು. ತಾಲೂಕು ಬೋರ್ಡ್‌ ಎಂದು ಅದನ್ನು ಕರೆಯಲಾಗುತ್ತಿತ್ತು. ಇದರ ಕಚೇರಿ ಹಳೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. 1987ರಲ್ಲಿ ಅಸ್ತಿತ್ವಕ್ಕೆ ಬಂದ ಜಿಲ್ಲಾ ಪರಿಷತ್‌, ಮಂಡಲ ಪಂಚಾಯತ್‌ ವ್ಯವಸ್ಥೆಯಲ್ಲಿ ಶಾಸಕರಿಗೆ, ಜಿಲ್ಲಾ ಪರಿಷತ್‌ ಸದಸ್ಯರಿಗೆ ಮತ್ತು ಮಂಡಲ ಪ್ರಧಾನರಿಗೆ ಸಂಪರ್ಕ ಕಲ್ಪಿ³ಸುವುದಕ್ಕಾಗಿ ತಾ.ಪಂ. ರಚಿಸಲಾಗಿತ್ತು. ಇದೇ ಕಟ್ಟಡದಲ್ಲಿ ಸಭೆ ನಡೆಯುತ್ತಿತ್ತು.

ತಿಂಗಳಲ್ಲಿ ಪೂರ್ಣ
ಹೊಸ ಕಟ್ಟಡ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ. ಇನ್ನೂ ಪೈಂಟಿಂಗ್‌ ಸಹಿತ ಅಂತಿಮ ಹಂತದ ಕೆಲಸ ಮಾತ್ರ ಬಾಕಿ ಇದೆ. ಒಂದು ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಟ್ಟಡ ಸಿದ್ಧಗೊಳ್ಳಲಿದೆ.
– ಭವಾನಿಶಂಕರ ಎನ್‌. ಇಒ, ತಾ.ಪಂ. ಸುಳ್ಯ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.