Bharat Jodo ನ್ಯಾಯ್ ಯಾತ್ರೆ ಸಮಾರೋಪ: ಸ್ಟಾಲಿನ್, ಅಖೀಲೇಶ್ ಭಾಗಿ
Team Udayavani, Mar 16, 2024, 1:09 AM IST
ಮುಂಬಯಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆ ಇದೇ ರವಿವಾರ ಮುಂಬಯಿಯಲ್ಲಿ ಸಂಪನ್ನವಾಗಲಿದೆ.
ಸಮಾರೋಪ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖೀಲೇಶ್ ಯಾದವ್, ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ ಎಂದು ಮಹಾರಾಷ್ಟ್ರ ವಿಧಾನಸಭೆಯ ವಿಪಕ್ಷ ನಾಯಕ ವಿಜಯ್ ವಡೆತ್ತಿವಾರ್ ತಿಳಿಸಿದ್ದಾರೆ.
ಮಾ.17ರಂದು ಮುಂಬಯಿಯ ದಾದರ್ನಲ್ಲಿರುವ ಶಿವಾಜಿ ಪಾರ್ಕ್ನಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಆಪ್ನ ಪ್ರತಿನಿಧಿಗಳು ಸೇರಿದಂತೆ ಇಂಡಿಯಾ ಒಕ್ಕೂಟದ ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಸಮಾರೋಪ ಸಮಾರಂಭಕ್ಕೂ ಮುನ್ನ ರಾಹುಲ್ ಗಾಂಧಿ ಅವರು ದಾದರ್ನಲ್ಲಿರುವ ಡಾ| ಬಿ.ಆರ್.ಅಂಬೇಡ್ಕರ್ ಅವರ ಚೈತ್ಯ ಭೂಮಿಗೆ ಭೇಟಿ ನೀಡಿ ಗೌರವ ಸಲ್ಲಿಸಲಿದ್ದಾರೆ ಎಂದು ವಿಜಯ್ ವಡೆತ್ತಿವಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ