ಡಾಲರ್ ಎದುರು ರೂಪಾಯಿ ಮೌಲ್ಯ 72ಕ್ಕೆ ಕುಸಿತ
Team Udayavani, Nov 13, 2019, 7:12 PM IST
ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯ ಕುಸಿತ ಮುಂದುವರೆದಿದ್ದು ಈ ನಡುವೆ ಬುಧವಾರ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ 72ಕ್ಕೆ ಕುಸಿದಿದೆ.
ಬುಧವಾರ ಭಾರತೀಯ ರೂಪಾಯಿ 62 ಪೈಸೆ ಕನಿಷ್ಠ ವಹಿವಾಟುಗೊಂಡು ಅಮೆರಿಕ ಡಾಲರ್ ಎದುರು 72.09 ರೂಪಾಯಿಗೆ ಕುಸಿಯಿತು. ಸೋಮವಾರ ಅಮೆರಿಕ ಡಾಲರ್ ಎದುರು 71.47 ರೂಪಾಯಿಗೆ ಇಳಿದಿದ್ದು, ಮಂಗಳವಾರ ಗುರು ನಾನಕ್ ಜಯಂತಿ ಪ್ರಯುಕ್ತ ವಿದೇಶಿ ವಿನಿಮಯ ಮಾರುಕಟ್ಟೆಗೆ ರಜೆ ಇತ್ತು. ಬಳಿಕ ತೆರೆದ ಮಾರುಕಟ್ಟೆಗೆ ಡಾಲರ್ ಹೊಡೆತ ಬಿದ್ದಿದೆ. ಅಟೊಮೊಬೈಲ್ ವಲಯ, ತಯಾರಿಕೆ ಮತ್ತು ಮೂಲಸೌಕರ್ಯ ವಲಯಗಳ ಕುಸಿತ, ಹೂಡಿಕೆ ಚಟುವಟಿಕೆಯಲ್ಲಿ ಇಳಿಕೆ ಕಂಡುಬರುತ್ತಿದೆ.
ಕಳೆದ ಸೆಪ್ಟೆಂಬರ್ ನಲ್ಲಿ ಕೈಗಾರಿಕಾ ಉತ್ಪಾದನೆ ಶೇ.4.3ಕ್ಕೆ ಕುಸಿದಿತ್ತು. ಸೋಮವಾರ ಬಿಡುಗಡೆಯಾದ ಅಧಿಕೃತ ಅಂಕಿ ಅಂಶಗಳ ಪ್ರಕಾರ ಉತ್ಪಾದನೆ, ಗಣಿಗಾರಿಕೆ ಮತ್ತು ವಿದ್ಯುತ್ ಕ್ಷೇತ್ರಗಳಲ್ಲಿನ ಉತ್ಪಾದನ ವಲಯ ಏಳು ವರ್ಷಗಳಲ್ಲಿ ಅತ್ಯಂತ ಕಳಪೆ ಸಾಧನೆ ಮಾಡಿವೆ. ಇವುಗಳೆಲ್ಲದರ ಪರಿಣಾಮ ಅಮೆರಿಕ ಡಾಲರ್ ಎದುರು ರೂಪಾಯಿ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್