ಅಕ್ಟೋಬರ್ 2ರಿಂದ ಏರ್ ಇಂಡಿಯಾದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

Team Udayavani, Aug 29, 2019, 2:59 PM IST

ನವದೆಹಲಿ:ಏರ್ ಇಂಡಿಯಾ ವಿಮಾನದಲ್ಲಿ ಪ್ಲಾಸ್ಟಿಕ್ ಬ್ಯಾಗ್, ಕಪ್ಸ್ ಹಾಗೂ ಸ್ಟ್ರಾ ಸೇರಿದಂತೆ ಎಲ್ಲಾ ವಿಧದ ಪ್ಲಾಸ್ಟಿಕ್ ವಸ್ತುಗಳಿಗೆ  ಅಕ್ಟೋಬರ್ 2ರಿಂದ ನಿಷೇಧ ಹೇರಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ರಾಷ್ಟ್ರಪಿತ ಮಹಾತ್ಮಗಾಂಧಿ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಅ.2ರಿಂದ ಏರ್ ಇಂಡಿಯಾದ ಎಲ್ಲಾ ವಿಮಾನಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಮೊದಲ ಹಂತದಲ್ಲಿ ಏರ್ ಇಂಡಿಯಾ ಸಹಭಾಗಿತ್ವದ ವಿಮಾನದಲ್ಲಿ ಹಾಗೂ ಎರಡನೇ ಹಂತದಲ್ಲಿ ಏರ್ ಇಂಡಿಯಾ ವಿಮಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುವುದು ಎಂದು ವಿವರಿಸಿದೆ.

ಏರ್ ಇಂಡಿಯಾದಲ್ಲಿ ವಿಶೇಷ ಊಟವನ್ನು ಪ್ಲಾಸ್ಟಿಕ್ ತಟ್ಟೆಯಲ್ಲಿ ನೀಡಲಾಗುತ್ತಿದ್ದು, ಇನ್ಮುಂದೆ ಪರಿಸರ ಸ್ನೇಹಿ ಸಾಧನ ಬಳಸಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಪ್ಲಾಸ್ಟಿಕ್ ಟಂಬ್ಲರ್ಸ್ಸ್, ಟೀ ಕಪ್ ಗಳ ಬದಲಾಗಿ ಪೇಪರ್ ಕಪ್ ಬಳಕೆ ಮಾಡಲಾಗುವುದು ಎಂದು ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ