ಇ ಕಾಮರ್ಸ್ ದೈತ್ಯ ಅಮೇಜಾನ್ 18 ಸಾವಿರ ಉದ್ಯೋಗಿಗಳನ್ನು ವಜಾ ಮಾಡುತ್ತಾ? ಕಂಪೆನಿ ಹೇಳಿದ್ದೇನು
Team Udayavani, Jan 5, 2023, 5:38 PM IST
ನವದೆಹಲಿ: ಇ- ಕಾಮರ್ಸ್ ದೈತ್ಯ ಕಂಪೆನಿ ಅಮೇಜಾನ್ ತನ್ನ 18 ಸಾವಿರ ಉದ್ಯೋಗಿಗಳನ್ನು ವಜಾ ಮಾಡಲಿದೆಯೆಂದು ಹೇಳಿಕೊಂಡಿದೆ. ಕಳೆದ ನವೆಂಬರ್ ತಿಂಗಳಲ್ಲಿ ಹತ್ತುಸಾವಿರ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಹೇಳಿಕೊಂಡಿದ್ದ ಕಂಪೆನಿ ಇದೀಗ 18 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಹೇಳಿಕೊಂಡಿದೆ.
ಕಂಪೆನಿಯ ಹೇಳಿಕೆಯಿಂದ ಉದ್ಯೋಗಿಗಳು ಆತಂಕಕೀಡಾಗಿದ್ದಾರೆ, ಕಂಪನಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಉದ್ಯೋಗ ಕಡಿತಕ್ಕೆ ರಿಟೇಲ್ ಮಾರಾಟ, ಮಾನವ ಸಂಪನ್ಮೂಲ ಹಾಗೂ ಉಪಕರಣಗಳ ವಿಭಾಗವನ್ನು ಕೇಂದ್ರೀಕರಿಸಲಿದೆ ಎಂದು ಅಮೆಜಾನ್ ಸಿಇಒ ಆ್ಯಂಡಿ ಜೆಸ್ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಅಮೇಜಾನ್ ಅಗತ್ಯಕ್ಕಿಂತ ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿರುವುದರಿಂದ ಆರ್ಥಿಕ ಸಮಸ್ಯೆ ಎದುರಾಗಿದ್ದು ಇದಕ್ಕೆ ಉದ್ಯೋಗ ಕಡಿತವೇ ಮಾರ್ಗ ಎಂದು ಜೆಸ್ಸಿ ಹೇಳಿಕೊಂಡಿದ್ದಾರೆ.
ಕೇವಲ ಅಮೇಜಾನ್ ಮಾತ್ರವಲ್ಲದೆ ಎಚ್ಪಿ, ಮೆಟಾ, ಮತ್ತು ಟ್ವಿಟರ್ನಂತಹ ಕಂಪನಿಗಳು ಕೂಡ ವೆಚ್ಚ ಕಡಿತ ಮಾಡಲು ಮುಂದಾಗಿವೆ ಎನ್ನಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ನ ಇನ್ನೊಂದು ಹೆಸರೇ ಭ್ರಷ್ಟಾಚಾರ, ಕಮಿಷನ್ ಮತ್ತು ಜಾತೀಯತೆ : ಜೆಪಿ ನಡ್ಡಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ