ಗ್ರಾಹಕರೇ ಗಮನಿಸಿ ಜ.31, ಫೆ.01 ಮತ್ತು ಮಾರ್ಚ್ ತಿಂಗಳಲ್ಲಿ ಸಾಲು ಸಾಲು ಬ್ಯಾಂಕ್ ಮುಷ್ಕರ!


Team Udayavani, Jan 24, 2020, 5:51 PM IST

Bank-Strike-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ನವದೆಹಲಿ: ಹೊಸ ವರ್ಷ ಪ್ರಾರಂಭದೊಂದಿಗೆ ಬ್ಯಾಂಕ್ ನೌಕರರ ಮುಷ್ಕರವೂ ಸಹ ಪ್ರಾರಂಭವಾದಂತಿದೆ. ಬ್ಯಾಂಕ್ ಸಂಘಟನೆಗಳ ಒಕ್ಕೂಟ ವೇದಿಕೆ (UFBU) ಜನವರಿ 31 ಮತ್ತು ಫೆಬ್ರವರಿ 01ರಂದು ಎರಡು ದಿನಗಳ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿವೆ. ಹಾಗಾಗಿ ಈ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಮುಖ ಬ್ಯಾಂಕಿಂಗ್ ವ್ಯವಹಾರವನ್ನು ಇರಿಸಿಕೊಳ್ಳದಿರುವುದು ಉತ್ತಮ.

ಆರ್ಥಿಕ ಸಮೀಕ್ಷೆ ಪ್ರಕಟಗೊಳ್ಳುವ ದಿನ ಹಾಗೂ ಕೇಂದ್ರ ಸರಕಾರದ ಬಜೆಟ್ ಮಂಡನೆ ದಿನವೇ ಯು.ಎಫ್.ಬಿ.ಯು. ಬ್ಯಾಂಕ್ ಮುಷ್ಕರಕ್ಕೆ ಕರೆನೀಡಿರುವುದು ವಿಶೇಷ. ಈ ಎರಡು ದಿನಗಳ ಬ್ಯಾಂಕ್ ನೌಕರರ ಮುಷ್ಕರದಿಂದಾಗಿ ಜನವರಿ 31 ಹಾಗೂ ಫೆಬ್ರವರಿ 01ರಂದು ಬ್ಯಾಂಕಿಂಗ್ ವ್ಯವಹಾರ ಅಸ್ತವ್ಯಸ್ತಗೊಳ್ಳುವ ನಿರೀಕ್ಷೆ ಇದೆ.

ಬ್ಯಾಂಕ್ ನೌಕರರ ಸಂಘಗಳ ಒಕ್ಕೂಟ ಕರೆನೀಡಿರುವ ಈ ಮುಷ್ಕರದಿಂದ ಈ ಎರಡು ದಿನಗಳ ಕಾಲ ತನ್ನ ಗ್ರಾಹಕರಿಗೆ ತೊಂದರೆಯಾಗದಂತಿರಲು ಸೂಕ್ತ ಬದಲೀ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ದೇಶದ ಅತೀ ದೊಡ್ಡ ಬ್ಯಾಂಕಿಂಗ್ ಜಾಲವಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.

ಒಂಭತ್ತು ಟ್ರೇಡ್ ಯೂನಿಯನ್ ಗಳ ಒಕ್ಕೂಟವಾಗಿರುವ ಯು.ಎಫ್.ಬಿ.ಯು. 2017ರ ನವಂಬರ್ 01ರಿಂದ ಬಗೆಹರಿಯದೇ ಉಳಿದಿರುವ ವೇತನ ಪರಿಷ್ಕರಣೆ ಬೇಡಿಕೆಯನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಒತ್ತಾಯಿಸಿ ಮಾರ್ಚ್ ತಿಂಗಳಲ್ಲೂ ಸಹ ಮೂರು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. 2020ರ ಮಾರ್ಚ್ 11, 12 ಮತ್ತು 13ರಂದು ಮುಷ್ಕರಕ್ಕೆ ಕರೆ ನೀಡಿರುವುದರಿಂದ ಈ ಮೂರು ದಿನ ಸಹ ಗ್ರಾಹಕರಿಗೆ ಪರದಾಟ ತಪ್ಪಿದ್ದಲ್ಲ.

ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆ, ಭಾರತೀಯ ಬ್ಯಾಂಕ್ ನೌಕರರ ಫೆಡರೇಷನ್, ಭಾರತೀಯ ರಾಷ್ಟ್ರೀಯ ಬ್ಯಾಂಕ್ ನೌಕರರ ಫೆಡರೇಶನ್, ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್, ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟ ಮತ್ತು ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಒಕ್ಕೂಟಗಳನ್ನು ಈ ಬ್ಯಾಂಕ್ ಸಂಘಟನೆಗಳ ಒಕ್ಕೂಟ ವೇದಿಕೆಯು (UFBU) ಒಳಗೊಂಡಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.