ಮುಂಬಯಿ ಶೇರು ಪೇಟೆ ಜಗ್ಗಿದ ಬ್ಯಾಂಕ್ ಶೇರುಗಳು; 99 ಅಂಕ ನಷ್ಟ
Team Udayavani, Feb 27, 2018, 4:41 PM IST
ಮುಂಬಯಿ : ದೇಶದ ಬ್ಯಾಂಕಿಂಗ್ ರಂಗದಲ್ಲಿ ಬಹುಕೋಟಿ ವಂಚನೆ ಹಗರಣಗಳು ಸುನಾಮಿಯನ್ನೇ ಎಬ್ಬಿಸಿರುವ ಕಾರಣ ಬ್ಯಾಂಕ್ ಶೇರುಗಳು ನೆಲಕಚುತ್ತಿರುವ ಪರಿಣಾಮವಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 99.36 ಅಂಕಗಳ ನಷ್ಟದೊಂದಿಗೆ 34,346.39 ಅಂಕಗಳ ಮಟ್ಟಕ್ಕೆ ಕುಸಿದು ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 28.30 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,554.30 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,028 ಶೇರುಗಳು ಮುನ್ನಡೆ ಕಂಡವು; 1,698 ಶೇರುಗಳು ಹಿನ್ನಡೆಗೆ ಗುರಿಯಾದವು; 201 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಭಾರ್ತಿ ಏರ್‌ಟೆಲ್, ಹೀರೋ ಮೋಟೋ ಕಾರ್ಪ್ ಮತ್ತು ಡಾ.ರೆಡ್ಡಿ ಲ್ಯಾಬೋರೇಟರಿ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು; ಎಸ್‌ಬಿಐ, ಎಕ್ಸಿಸ್ ಬ್ಯಾಂಕ್ ಮತ್ತು ಅಂಬುಜಾ ಸಿಮೆಂಟ್ಸ್ ಶೇರುಗಳು ಟಾಪ್ ಲೂಸರ್ ಎನಿಸಿಕೊಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್