271 ಅಂಕ ಕುಸಿದ ಮುಂಬಯಿ ಶೇರು; ಶೇ.9.6 ಕುಸಿದ ಇನ್ಫಿ ಶೇರು
Team Udayavani, Aug 18, 2017, 4:20 PM IST
ಮುಂಬಯಿ : ಭಾರತೀಯ ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆಯ ಎಂಡಿ ಹಾಗೂ ಸಿಇಓ ಆಗಿರುವ ವಿಶಾಲ್ ಸಿಕ್ಕಾ ಅವರಿಂದು ಹಠಾತ್ತನೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 270.78 ಅಂಕಗಳ ನಷ್ಟದೊಂದಿಗೆ 31,524.68 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 66.75 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 9,837.40 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಸಿಕ್ಕಾ ರಾಜೀನಾಮೆಯ ಕಾರಣ ತೀವ್ರ ಮಾರಾಟದ ಒತ್ತಡಕ್ಕೆ ಗುರಿಯಾದ ಇನ್ಫೋಸಿಸ್ ಶೇರುಗಳು ಶೇ.9.60 ಪ್ರಮಾಣದಲ್ಲಿ ಕುಸಿತಕ್ಕೆ ಗುರಿಯಾಗಿ 884.40 ರೂ.ಗಳ ತಳವನ್ನು ಕಂಡು
ಅಂತಿಮವಾಗಿ 923.10 ರೂ. ಮಟ್ಟದಲ್ಲಿ ನೆಲೆಗೊಂಡವು.
ಈ ವಾರದಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಅನುಕ್ರಮವಾಗಿ 311.09 ಅಂಕ (ಶೇ.0.99) ಮತ್ತು 126.60 (ಶೇ.1.30) ಅಂಕಗಳ ಏರಿಕೆಯನ್ನು ದಾಖಲಿಸಿವೆ. ಇದು ಕಳೆದ ಏಳು ವಾರಗಳಲ್ಲಿ ಶೇರು ಮಾರುಕಟ್ಟೆಯು ದಾಖಲಿಸಿರುವ ಆರನೇ ಬಾರಿಯ ವಾರಂತ್ಯದ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್