ಲಾಭನಗದೀಕರಣದ ಶೇರು ಮಾರಾಟ: ಸೆನ್ಸೆಕ್ಸ್ 107 ಅಂಕ ನಷ್ಟ
Team Udayavani, Dec 4, 2018, 4:18 PM IST
ಮುಂಬಯಿ : ಏಶ್ಯನ್ ಶೇರು ಪೇಟೆಗಳಲ್ಲಿ ಕಂಡು ಬಂದ ಮಂದಗತಿ, ತೈಲ ಬೆಲೆಯಲ್ಲಿನ ಏರುಗತಿ, ಡಾಲರ್ ಎದುರು ರೂಪಾಯಿ ದೌರ್ಬಲ್ಯ ಇವೇ ಮೊದಲಾದ ಕಾರಣಕ್ಕೆ ಇಂದು ಮಂಗಳವಾರ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ 106.69 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 36,134.31 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 14.25 ಅಂಕಗಳ ನಷ್ಟದೊಂದಿಗೆ 10,869.50 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.
ಡಾಲರ್ ಎದುರು ರೂಪಾಯಿ ಇಂದಿನ ವಹಿವಾಟಿನಲ್ಲಿ 9 ಪೈಸೆ ಕುಸಿತವನ್ನು ಕಂಡು 70.55 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,717 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,160 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,412 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 145 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ