ಮುಂಬಯಿ ಶೇರು ಪೇಟೆ 2ನೇ ದಿನವೂ ಕುಸಿತ: ಸೆನ್ಸೆಕ್ಸ್ 275 ಅಂಕ ನಷ್ಟ
Team Udayavani, Nov 21, 2018, 5:09 PM IST
ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿನ ದೌರ್ಬಲ್ಯವನ್ನು ಅನುಸರಿಸಿರುವ ಮುಂಬಯಿ ಶೇರು ಪೇಟೆ ಇಂದು ನಿರಂತರ ಎರಡನೇ ದಿನವೂ ಸೋಲಿನ ಹಾದಿಯಲ್ಲಿ ಕ್ರಮಿಸಿದ್ದು 274.71 ಅಂಕಗಳ ನಷ್ಟದೊಂದಿಗೆ ಸೆನ್ಸೆಕ್ಸ್ ಇಂದು ಬುಧವಾರದ ವಹಿವಾಟನ್ನು 35,199.80 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ನಿನ್ನೆ ಮಂಗಳವಾರ ಸೆನ್ಸೆಕ್ಸ್ 300.37 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 56.15 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,600.05 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಪವರ್ ಗ್ರಿಡ್, ಆರ್‌ಐಎಲ್, ಬಜಾಜ್ ಆಟೋ, ಟಾಟಾ ಸ್ಟೀಲ್, ಇಂಡಸ್ ಇಂಡ್ ಬ್ಯಾಂಕ್, ಲಾರ್ಸನ್, ಒಎನ್‌ಜಿಸಿ, ಎಚ್ ಡಿ ಎಫ್ ಸಿ, ಐಸಿಐಸಿಐ ಬ್ಯಾಂಕ್ ಶೇರುಗಳು ಶೇ.2.77ರಷ್ಟು ಕುಸಿದವು. ಹಾಗಿದ್ದರೂ ಎಸ್ ಬ್ಯಾಂಕ್ ಶೇರು ಇಂದು ಶೇ.2.83 ಏರಿಕೆಯನ್ನು ದಾಖಲಿಸಿತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,448 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,089 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,223 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 136 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ