ಫೆಡ್ ರೇಟ್ ಏರುವ ಭೀತಿ: ಸೆನ್ಸೆಕ್ಸ್ 79 ಅಂಕ ನಷ್ಟ,ನಿಫ್ಟಿ 10,585
Team Udayavani, Nov 9, 2018, 4:19 PM IST
ಮುಂಬಯಿ : ಏಶ್ಯನ್ ಶೇರು ಪೇಟೆಗಳಲ್ಲಿನ ಅಸ್ಥಿರತೆ, ಫೆಡ್ ರೇಟ್ ಏರುವ ಭೀತಿ, ಮುಂದುವರಿದಿರುವ ವಿದೇಶಿ ಬಂಡವಾಳದ ಹೊರ ಹರಿವು ಇವೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 79.13 ಅಂಕಗಳ ನಷ್ಟದೊಂದಿಗೆ 35,158.55 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 13.12 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,585.20 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇಂದು ಬೆಳಗ್ಗಿನ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ 35 ಪೈಸೆಯ ಚೇತರಿಕೆಯನ್ನು ಕಂಡು 72.65 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತಾದರೂ ಶೇರು ಮಾರುಕಟ್ಟೆ ಅದರಿಂದ ಉತ್ತೇಜನ ಪಡೆಯಲಿಲ್ಲ.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,679 ಕಂಪೆನಿಗಳ ಶೇರುಗಳ ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,337 ಶೇರುಗಳು ಮುನ್ನಡೆ ಸಾಧಿಸಿದವು; 1,200 ಶೇರುಗಳು ಹಿನ್ನಡೆಗೆ ಗುರಿಯಾದವು; 142 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್