ಮುಂಬಯಿ ಶೇರು 113 ಅಂಕ ಏರಿಕೆ; ರಿಲಯನ್ಸ್ ಶೇ.3.52 ಜಿಗಿತ
Team Udayavani, Feb 4, 2019, 11:24 AM IST
ಮುಂಬಯಿ : ಆರಂಭಿಕ ವಹಿವಾಟಿನಲ್ಲಿ ಕುಸಿತ ಕಂಡಿದ್ದ ಮುಂಬಯಿ ಶೇರು ಪೇಟೆ ಅನಂತರದಲ್ಲಿ ಚೇತರಿಕೆಯನ್ನು ಕಂಡು ಇಂದು ಸೋಮವಾರದ ವಹಿವಾಟನ್ನು 113.31 ಅಂಕಗಳ ಮುನ್ನಡೆಯೊಂದಿಗೆ 36,582.74 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಮುಂಬಯಿ ಶೇರು ಮಾರುಕಟ್ಟೆಯ ಇಂದಿನ ತೇಜಿಗೆ ರಿಲಯನ್ಸ್ ಶೇರು ಮತ್ತು ವಿದೇಶೀ ಹೂಡಿಕೆದಾರರಿಂದ ನಡೆದ ಭರಾಟೆಯ ಮುಂಚೂಣಿ ಶೇರುಗಳ ಖರೀದಿಯೇ ಕಾರಣವಾಯಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 18.60 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 10,912.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,761 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 781 ಶೇರುಗಳು ಮುನ್ನಡೆ ಸಾಧಿಸಿದವು; 1,776 ಶೇರುಗಳು ಹಿನ್ನಡೆಗೆ ಗುರಿಯಾದವು; 204 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್