321 ಅಂಕಗಳ ಭರ್ಜರಿ ಏರಿಕೆ ದಾಖಲಿಸಿದ ಮುಂಬಯಿ ಶೇರು
Team Udayavani, Aug 16, 2017, 4:22 PM IST
ಮುಂಬಯಿ : ದೇಶೀಯ ಹೂಡಿಕೆದಾರರಿಂದ ಹೆಚ್ಚಿದ ಬಂಡವಾಳ ಒಳ ಹರಿವಿನ ಪರಿಣಾಮವಾಗಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 321.86 ಅಂಕಗಳ ಭರ್ಜರಿ ಏರಿಕೆಯೊಂದಿಗೆ 31,770.89 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 103.15 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 9,897.30 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿದೆ.
ಅತ್ಯಂತ ಧನಾತ್ಮಕವಾಗಿದ್ದ ಇಂದಿನ ವಹಿವಾಟು ಹರಹಿನಲ್ಲಿ 1,638 ಶೇರುಗಳು ಮುನ್ನಡೆ ಕಂಡವು; 946 ಶೇರುಗಳ ಹಿನ್ನಡೆಗೆ ಗುರಿಯಾದವು; 118 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಸಿಪ್ಲಾ, ಟಾಟಾ ಮೋಟರ್, ಟೆಕ್ ಮಹೀಂದ್ರ ಶೇರುಗಳು ಟಾಪ್ ಗೇನರ್ಎನಿಸಿಕೊಂಡವು. ಎನ್ಟಿಪಿಸಿ, ಏಶ್ಯನ್ ಪೇಂಟ್, ಪವರ್ ಗ್ರಿಡ್ ಶೇರುಗಳು ಟಾಪ್ ಲೂಸರ್ ಎನಿಸಿಕೊಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!