2 ತಿಂಗಳ ಗರಿಷ್ಠ ಮಟ್ಟವನ್ನು ಮುಟ್ಟಿದ ಸೆನ್ಸೆಕ್ಸ್; 35 ಅಂಕ ಏರಿಕೆ
Team Udayavani, Apr 23, 2018, 5:09 PM IST
ಮುಂಬಯಿ : ಸಾಕಷ್ಟು ಏರಿಳಿತಗಳನ್ನು ಕಂಡ ಇಂದು ಸೋಮವಾರದ ವಹಿವಾಟಿನಲ್ಲಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಅಂತಿಮವಾಗಿ 35 ಅಂಕಗಳ ಏರಿಕೆಯನ್ನು ದಾಖಲಿಸಿ ಎರಡು ತಿಂಗಳ ಗರಿಷ್ಠವಾಗಿ 34,450.77 ಅಂಕಗಳ ಮಟ್ಟಕ್ಕೆ ತಲುಪಿತು. ರಿಯಲ್ಟಿ, ಹೆಲ್ತ್ ಕೇರ್, ಕನ್ಸೂಮರ್ ಡ್ನೂರೇಬಲ್ಸ್ ಮತ್ತು ಐಟಿ ವಲಯದ ಶೇರುಗಳು ಇಂದು ಉತ್ತಮ ಮುನ್ನಡೆ ಕಂಡವು.
ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿನ ಮಿಶ್ರ ಪ್ರತಿಕ್ರಿಯೆ, ಕೆಳಮಟ್ಟದಲ್ಲಿ ಆರಂಭ ಕಂಡ ಯುರೋಪ್ ಶೇರು ಪೇಟೆ, ದುರ್ಬಲ ರೂಪಾಯಿ ಇವೇ ಮೊದಲಾದ ಕಾರಣಗಳು ಮುಂಬಯಿ ಶೇರು ಪೇಟೆಯ ಮೇಲೆ ಪ್ರಭಾವ ಬೀರಿದವು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 20.65 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,514.95 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,847 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟಡವು. ಈ ಪೈಕಿ 1,384 ಶೇರುಗಳು ಮುನ್ನಡೆ ಕಂಡವು; 1,304 ಶೇರುಗಳು ಹಿನ್ನಡೆಗೆ ಗುರಿಯಾದವು; 159 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ