ಮುಂಬಯಿ ಶೇರು ಪೇಟೆಯಲ್ಲಿ ಮತ್ತೆ ಗೂಳಿಯಾಟ: 235 ಅಂಕ ಜಿಗಿತ
Team Udayavani, Aug 14, 2017, 4:20 PM IST
ಮುಂಬಯಿ : ಕಳೆದ ವಾರದ ಐದೂ ದಿನಗಳ ವಹಿವಾಟಿನಲ್ಲಿ 1,111 ಅಂಕಗಳ ಬೃಹತ್ ನಷ್ಟಕ್ಕೆ ಗುರಿಯಾಗಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಸೋಮವಾರದ ವಹಿವಾಟನ್ನು 235.44 ಅಂಕಗಳ ಉತ್ತಮ ಜಿಗಿತದೊಂದಿಗೆ 31,449.03 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 83.35 ಅಂಕಗಳ ಜಿಗಿತವನ್ನು ದಾಖಲಿಸಿ 9,794.15 ಅಂಕಗಳ ಮಟ್ಟವನ್ನು ತಲುಪಿತಾದರೂ ತನ್ನ ಐತಿಹಾಸಿಕ ಸಾಧನೆಯ 10,000 ಅಂಕಗಳ ಮಟ್ಟವನ್ನು ಪುನರ್ ಸಂಪಾದಿಸುವಲ್ಲಿ ವಿಫಲವಾಯಿತು.
ಇಂದಿನ ವಹಿವಾಟಿನಲ್ಲಿ ಮಾರುಕಟ್ಟೆಯ ವಹಿವಾಟು ಹರಹು ಧನಾತ್ಮಕವಾಗಿತ್ತು. 1,880 ಶೇರಗಳು ಇಂದು ಮುನ್ನಡೆ ಸಾಧಿಸಿದರೆ 720 ಶೇರುಗಳು ಹಿನ್ನಡೆಗೆ ಗುರಿಯಾದವು; 120 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಸಿಪ್ಲಾ ಮತ್ತು ಸನ್ ಫಾರ್ಮಾ ಶೇರುಗಳು ಟಾಪ್ ಗೇನರ್ ಪಟ್ಟಿಯಲ್ಲಿ ವಿಜೃಂಭಿಸಿದವು; ಆದರೆ ಎಸ್ಬಿಐ, ಕೋಟಕ್ ಮಹೀಂದ್ರ, ಭಾರ್ತಿ ಏರ್ಟೆಲ್ ಮತ್ತು ಬಾಶ್ ನಷ್ಟಕ್ಕೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ