ನಿರಂತರ 6ನೇ ದಿನ ಕುಸಿತ: ಮುಂಬಯಿ ಶೇರು 561 ಅಂಕ ನಷ್ಟ

Team Udayavani, Feb 6, 2018, 4:19 PM IST

ಮುಂಬಯಿ : ಜಾಗತಿಕ ಮಾರುಕಟ್ಟೆಗಳಲ್ಲಿ ನಿರಂತರ ಕುಸಿತಕ್ಕೆ ನಲುಗಿರುವ ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ವಹಿವಾಟನ್ನು, ನಿರಂತರ ಆರನೇ ಕುಸಿತದ ದಿನವಾಗಿ, 561 ಅಂಕಗಳ ಭಾರೀ ನಷ್ಟದೊಂದಿಗೆ 34,195.94 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.

ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 168.30 ಅಂಕಗಳ ಕುಸಿತಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,498.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಇದೇ ವರ್ಷ ಜನವರಿ 3ರಂದು ನಿಫ್ಟಿ 10,443.20 ಅಂಕಗಳ ನಿಕೃಷ್ಟ ಮಟ್ಟವನ್ನು ಕಂಡಿತ್ತು. 

ಹೂಡಿಕೆದಾರರು ಈಗಿನ್ನು ಆರ್‌ಬಿಐ ಹಣಕಾಸು ನೀತಿ ಪರಾಮರ್ಶೆಯ ಫ‌ಲಿತಾಂಶವನ್ನು ಕಾತರದಿಂದ ಎದುರು ನೋಡುತ್ತಿದ್ದಾರೆ. ಬಜೆಟ್‌ ತಂದ ನಿರಾಶೆಯ ಬೆನ್ನಿಗೇ ಜಾಗತಿಕ ಶೇರುಗಳ ಕುಸಿತ  ಮುಂಬಯಿ ಶೇರು ಪೇಟೆಯಲ್ಲಿ ಭಾರೀ ತಲ್ಲಣಕ್ಕೆ ಕಾರಣವಾಗಿದೆ. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,901 ಶೇರುಗಳು ವಹಿವಾಟಿಗೆ ಒಳಪಟ್ಟವು.ಕೇವಲ 529 ಶೇರುಗಳು ಮುನ್ನಡೆ ಕಂಡವು; 2,223 ಶೇರುಗಳು ಹಿನ್ನಡೆಗೆ ಗುರಿಯಾದವು; 149 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ