ಮುಂಬಯಿ ಶೇರು 166 ಅಂಕ ಕುಸಿತ; ನಿಫ್ಟಿ 10,879ರ ಮಟ್ಟಕ್ಕೆ
Team Udayavani, Feb 11, 2019, 5:52 AM IST
ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 150ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಅಮೆರಿಕ – ಚೀನ ವಾಣಿಜ್ಯ ಸುಂಕ ಸಮರ ತಾರಕಕ್ಕೇರುವ ಭೀತಿ, ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ಋಣಾತ್ಮಕತೆಯೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆಯಲ್ಲಿಂದು ಆರಂಭಿಕ ವಹಿವಾಟಿನಲ್ಲಿ ಆಟೋ, ಬ್ಯಾಂಕಿಂಗ್, ಪವರ್ ಮತ್ತು ಫಾರ್ಮಾ ಶೇರುಗಳು ವ್ಯಾಪಕವಾಗಿ ಮಾರಾಟದ ಒತ್ತಡಕ್ಕೆ ಗುರಿಯಾದವು.
ಬೆಳಗ್ಗೆ 11.30ರ ಸುಮಾರಿಗೆ ಸೆನ್ಸೆಕ್ಸ್ 166.52 ಅಂಕಗಳ ನಷ್ಟದೊಂದಿಗೆ 36,379.96 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 64.40 ಅಂಕಗಳ ನಷ್ಟದೊಂದಿಗೆ 10,879.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ 9 ಪೈಸೆಯ ಏರಿಕೆಯನ್ನು ಕಂಡು 71.22 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!