3 ದಿನಗಳ ಗೆಲುವಿನ ಓಟಕ್ಕೆ ಬ್ರೇಕ್; ಮುಂಬಯಿ ಶೇರು 216 ಅಂಕ ನಷ್ಟ
Team Udayavani, May 29, 2018, 5:20 PM IST
ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕದ ಕಳೆದ ಮೂರು ದಿನಗಳ ನಿರಂತರ ಗೆಲುವಿನ ಓಟಕ್ಕೆ ಇಂದು ಮಂಗಳವಾರ ಬ್ರೇಕ್ ಬಿದ್ದಿದೆ. ಅಂತೆಯೇ ಸೆನ್ಸೆಕ್ಸ್ 35,000 ಅಂಕಗಳಿಗಿಂತ ಕೆಳಗಿನ ಮಟ್ಟಕ್ಕೆ ಜಾರಿದೆ.
ದಿನದ ವಹಿವಾಟನ್ನು ಸೆನ್ಸೆಕ್ಸ್ 216.24 ಅಂಕಗಳ ನಷ್ಟದೊಂದಿಗೆ 34,949.24 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ. ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 55.35 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,633.30 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ. ಸೆನ್ಸೆಕ್ಸ್ ಕಳೆದ ಮೂರು ದಿನಗಳ ಗೆಲುವಿನ ಓಟದಲ್ಲಿ 820.57 ಅಂಕಗಳನ್ನು ಸಂಪಾದಿಸಿತ್ತು.
ಡಾಲರ್ ಎದುರು ರೂಪಾಯಿ ಇಂದು ವಹಿವಾಟಿನ ನಡುವೆ ಒಂದು ಹಂತದಲ್ಲಿ 57 ಪೈಸೆ ಕುಸಿಯಿತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,843 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,214 ಶೇರುಗಳು ಮುನ್ನಡೆ ಸಾಧಿಸಿದವು; 1,470 ಶೇರುಗಳು ಹಿನ್ನಡೆ ಕಂಡವು; 159 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್