ರೂಪಾಯಿ ಚೇತರಿಕೆ, ಇಳಿದ ತೈಲ ಬೆಲೆ: ಸೆನ್ಸೆಕ್ಸ್ 159 ಅಂಕ ಜಂಪ್
Team Udayavani, Nov 27, 2018, 4:47 PM IST
ಮುಂಬಯಿ : ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿನ ಇಳಿಕೆ, ಡಾಲರ್ ಎದುರು ರೂಪಾಯಿಯ ಚೇತರಿಕೆ, ಅಮೆರಿಕ-ಚೀನ ವಾಣಿಜ್ಯ ಸುಂಕ ಸಮರ ಭೀತಿಯ ತಾತ್ಕಾಲಿಕ ನಿವಾರಣೆಯೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 159.06 ಅಂಕಗಳ ಏರಿಕೆಯೊಂದಿಗೆ 35,513.14 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 57 ಅಂಕಗಳ ಏರಿಕೆಯನ್ನು ಕಂಡು 10,685.60 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 15 ಪೈಸೆಯ ನಷ್ಟಕ್ಕೆ ಗುರಿಯಾಗಿ 71.02 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. ಹಾಲಿ ನವೆಂಬರ್ ತಿಂಗಳಲ್ಲಿ ಸೌದಿ ಅರೇಬಿಯ ತನ್ನ ತೈಲ ಉತ್ಪಾದನೆಯನ್ನು ಸಾರ್ವಕಾಲಿಕ ಎತ್ತರ ಮಟ್ಟಕ್ಕೆ ಒಯ್ದಿರುವ ಕಾರಣ ಕಚ್ಚಾ ತೈಲ ಬೆಲೆ ಗಮನಾರ್ಹವಾಗಿ ಇಳಿದಿರುವುದು ಭಾರತಕ್ಕೆ ವರವಾಗಿ ಪರಿಣಮಿಸಿದೆ ಎಂದು ಪರಿಣತರು ಅಭಿಪ್ರಾಯಪಟ್ಟಿದ್ದಾರೆ.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,739 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,234 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,333 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 172 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!