ಸೆಬಿ ಉಪಕ್ರಮಗಳ ಫಲಶ್ರುತಿ; ಮುಂಬಯಿ ಶೇರು 136 ಅಂಕ ಜಿಗಿತ
Team Udayavani, Jun 22, 2017, 11:06 AM IST
ಮುಂಬಯಿ : ಬ್ಯಾಂಕುಗಳ ಬಾಕಿ ಸಾಲ ವಸೂಲಾತಿ ಕ್ರಮವನ್ನು ಚುರುಕುಗೊಳಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಗರಿಗೆದರಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 136 ಅಂಕಗಳ ಜಿಗಿತವನ್ನು ದಾಖಲಿಸಿತು. ಶೇರು ಹೂಡಿಕೆಯನ್ನು ಆಕರ್ಷಕಗೊಳಿಸಲು ಸೆಬಿ ಕೈಗೊಂಡಿರುವ ಹಲವಾರು ಉಪಕ್ರಮಗಳು ಕೂಡ ಶೇರು ಮಾರುಕಟ್ಟೆಗೆ ಇಂದು ಚೇತೋಹಾರಿ ಎನಿಸಿತು.
ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್ 175.85 ಅಂಕಗಳ ಏರಿಕೆಯೊಂದಿಗೆ 31,459.49 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 45.25 ಅಂಕಗಳ ಏರಿಕೆಯೊಂದಿಗೆ 9,678.85 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ರಿಲಯನ್ಸ್, ಮಾರುತಿ ಸುಜುಕಿ, ಎಚ್ ಡಿ ಎಫ್ ಸಿ, ಅರಬಿಂದೋ ಫಾರ್ಮಾ, ಲೂಪಿನ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಇಂದು ಬೆಳಗ್ಗಿನ ವಹಿವಾಟಿನಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ