ಮುಂಬಯಿ ಶೇರು 336 ಅಂಕ ಕುಸಿತ, ನಿಫ್ಟಿ 10,900ರ ಕೆಳಮಟ್ಟಕ್ಕೆ
Team Udayavani, Jan 23, 2019, 11:17 AM IST
ಮುಂಬಯಿ : ಜಾಗತಿಕ ಆರ್ಥಿಕತೆ ನಿಧಾನಗೊಳ್ಳುತ್ತಿರುವುದು ಮತ್ತು ಅಮೆರಿಕ ಮತ್ತು ಚೀನ ನಡುವಿನ ವಾಣಿಜ್ಯ ಸಂಬಂಧ ಇನ್ನೂ ಜಿಗುಟಾಗೇ ಉಳಿದಿರುವುದು ಮತ್ತಿತರ ಕಾರಣಕ್ಕೆ ಇಂದು ಬುಧವಾರ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ 336 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 36,108.47 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 91.25 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,831.50 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ನಿನ್ನೆಯ ವಹಿವಾಟಿನಲ್ಲಿ 134.32 ಅಂಕಗಳ ನಷ್ಟಕ್ಕೆ ಗುರಿಯಾಗಿದ್ದ ಸೆನ್ಸೆಕ್ಸ್ ಇಂದು ಕೊನೇ ತಾಸಿನಲ್ಲಿ ಬೇಕಾಬಿಟ್ಟಿ ಮಾರಾಟ ಒತ್ತಡಕ್ಕೆ ಗುರಿಯಾಗಿ 336 ಅಂಕಗಳ ನಷ್ಟವನ್ನು ಅನುಭವಿಸಿತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,689 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,068 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,477 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 144 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್