ದಿನಪೂರ್ತಿ ಏಳುಬೀಳು; ಅಲ್ಪ ಏರಿಕೆಗೆ ಮುಂಬಯಿ ಶೇರು ತೃಪ್ತ
Team Udayavani, Jan 16, 2019, 11:17 AM IST
ಮುಂಬಯಿ : ವಹಿವಾಟಿನ ಉದ್ದಕ್ಕೂ ಏಳು ಬೀಳುಗಳನ್ನು ಕಾಣುತ್ತಲೇ ಸಾಗಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು ಅಲ್ಪ ಏರಿಕೆಯ ರೂಪದಲ್ಲಿ 2.96 ಅಂಕಗಳ ಮುನ್ನಡೆಯೊದಿಗೆ 36,321.29 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 3.50 ಅಂಕಗಳ ಅಲ್ಪ ಏರಿಕೆಗೆ ತೃಪ್ತಿ ಪಟ್ಟು ದಿನದ ವಹಿವಾಟನ್ನು 10,890.30 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಎಸ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಇನ್ಫೋಸಿಸ್, ಐಸಿಐಸಿಐ ಬ್ಯಾಂಕ್, ಟಿಸಿಎಸ್, ಎಸ್ಬಿಐ, ರಿಲಯನ್ಸ್, ಒಎನ್ಜಿಸಿ, ಎಕ್ಸಿಸ್ ಬ್ಯಾಂಕ್ ಮತ್ತು ಎನ್ಟಿಪಿಸಿ ಶೇರುಗಳು ಶೇ.2.66ರಷ್ಟು ಏರಿದವು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,725 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,225 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,354 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 146 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್