ಮುಂಬಯಿ ಶೇರು ಗೆಲುವಿನ ಓಟ 6ನೇ ದಿನಕ್ಕೆ: 77 ಅಂಕ ಜಂಪ್
Team Udayavani, Dec 18, 2018, 4:20 PM IST
ಮುಂಬಯಿ : ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಅನುಭವಿಸಿದ ನಷ್ಟವನ್ನೆಲ್ಲ ಹಿಂದಿಕ್ಕುವಲ್ಲಿ ಸಫಲವಾದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ, ದಿನದ ವಹಿವಾಟನ್ನು 77.01 ಅಂಕಗಳ ಏರಿಕೆಯೊಂದಿಗೆ 36,347.08 ಅಂಕಗಳ ಮಟ್ಟವನ್ನು ತಲುಪಿ ನಿರಂತರ ಆರನೇ ದಿನದ ಗೆಲುವಿನ ಓಟವನ್ನು ಕಾಯ್ದುಕೊಳ್ಳುವಲ್ಲಿ ಸಫಲವಾಯಿತು.
ಕಳೆದ ಐದು ದಿನಗಳ ನಿರಂತರ ಗೆಲುವಿನ ಓಟದಲ್ಲಿ ಸೆನ್ಸೆಕ್ಸ್ ಒಟ್ಟು 1,310 ಅಂಕಗಳನ್ನು ಸಂಪಾದಿಸಿದೆ.
ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 20.35 ಅಂಕಗಳ ಮುನ್ನಡೆಯೊಂದಿಗೆ ದಿನದ ವಹಿವಾಟನ್ನು 10,908.70 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಡಾಲರ್ ಎದುರು ರೂಪಾಯಿ ಚೇತರಿಕೆ ಕಂಡದ್ದೇ ಇಂದು ಶೇರು ಮಾರುಕಟ್ಟೆಗೆ ಹುರುಪು ನೀಡಿತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,723 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,441 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,119 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 163 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ