ಮೂರು ದಿನಗಳ ಕುಸಿತಕ್ಕೆ ಬ್ರೇಕ್: ಸೆನ್ಸೆಕ್ಸ್ 141 ಅಂಕ ಏರಿಕೆ
Team Udayavani, Feb 21, 2018, 4:21 PM IST
ಮುಂಬಯಿ : ಮೂರು ದಿನಗಳ ನಿರಂತರ ಕುಸಿತಕ್ಕೆ ಕೊನೆಗೂ ಬ್ರೇಕ್ ಹಾಕುವಲ್ಲಿ ಸಫಲವಾಗಿರುವ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ, ಹೂಡಿಕೆದಾರರಿಂದ ನಡೆದ ಮೌಲ್ಯಯುತ ಶೇರುಗಳ ವ್ಯಾಪಕ ಖರೀದಿಯ ಬಲದಲ್ಲಿ 141.27 ಅಂಕಗಳ ಏರಿಕೆಯೊಂದಿಗೆ ಇಂದು ಬುಧವಾರದ ವಹಿವಾಟನ್ನು 33,844.86 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 37.05 ಅಂಕಗಳ ಏರಿಕೆಯನ್ನು ದಾಖಲಿಸಿ 10,397.45 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.
ಸೆನ್ಸೆಕ್ಸ್ ಕಳೆದ ಮೂರು ದಿನಗಳ ವಹಿವಾಟಿನಲ್ಲಿ ಒಟ್ಟಾರೆಯಾಗಿ 593.88 ಅಂಕಗಳ ನಷ್ಟಕ್ಕೆ ಗುರಿಯಾಗಿದ್ದು ಇಂದು ಬುಧವಾರದ ಏರಿಕೆಯು ಸಮಾಧಾನವನ್ನು ತಂದಿತು. ಕಚ್ಚಾ ತೈಲ ದರದಲ್ಲಿನ ಇಳಿಕೆಯು ಶೇರು ಮಾರುಕಟ್ಟೆಗೆ ಅನುಕೂಲಕರವಾಗಿ ಪರಿಣಮಿಸಿತು.
ಇಂದಿನ ವಹಿವಾಟಿನಲ್ಲಿ ಎಚ್ಸಿಎಲ್ ಟೆಕ್, ಟೆಕ್ ಮಹೀಂದ್ರ, ಟಿಸಿಎಸ್, ಐಟಿಸಿ, ಒಎನ್ಜಿಸಿ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು; ಸನ್ ಫಾರ್ಮಾ, ಹಿಂಡಾಲ್ಕೊ, ಬಜಾಜ್ ಫಿನಾನ್ಸ್, ಇಂಡಸ್ಇಂಡ್ ಬ್ಯಾಂಕ್, ಟಾಟಾ ಸ್ಟೀಲ್ ಶೇರುಗಳು ಟಾಪ್ ಲೂಸರ್ ಎನಿಸಿಕೊಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ