ಆರಂಭಿಕ ಹಿನ್ನಡೆಯ ಬಳಿಕ ಚೇತರಿಕೆ: ಸೆನ್ಸೆಕ್ಸ್ 47 ಅಂಕ ಏರಿಕೆ
Team Udayavani, Mar 5, 2019, 5:32 AM IST
ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 50ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದ ದುರ್ಬಲ ಪ್ರವೃತ್ತಿ, ಚೀನ ಆರ್ಥಿಕತೆಯಲ್ಲಿನ ನಿಧಾನ ಗತಿ ಮತ್ತು ಅಮೆರಿಕ – ಚೀನ ವಾಣಿಜ್ಯ ಮಾತುಕತೆಗಳಲ್ಲಿ ತೋರಿಬಂದಿರುವ ಎಚ್ಚರಿಕೆಯ ನಡೆ ಇವೇ ಮೊದಲಾದ ಕಾರಣಗಳಿಗೆ ಮುಂಬಯಿ ಶೇರು ಪೇಟೆಯಲ್ಲಿ ಇಂದು ಹಿನ್ನಡೆ ಕಂಡು ಬಂತು.
ಬೆಳಗ್ಗೆ 10.50ರ ಸುಮಾರಿಗೆ ಸೆನ್ಸೆಕ್ಸ್ ಸ್ವಲ್ಪ ಮಟ್ಟಿನ ಸುಧಾರಣೆಯನ್ನು ಕಂಡು 47.50 ಅಂಕಗಳ ಏರಿಕೆಯೊಂದಿಗೆ 37.113/1 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 25.90 ಅಂಕಗಳ ಏರಿಕೆಯೊಂದಿಗೆ 10,889.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ 11 ಪೈಸೆಗಳ ಏರಿಕೆಯನ್ನು ದಾಖಲಿಸಿ 70.81 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ