ಆರನೇ ದಿನವೂ ಮುನ್ನಡೆದ ಮುಂಬಯಿ ಶೇರು 161 ಅಂಕ ಏರಿಕೆ

Team Udayavani, Apr 12, 2018, 4:40 PM IST

Sensex Musings1-700.jpg

ಮುಂಬಯಿ : ನಿರಂತರ ಆರನೇ ದಿನ ತನ್ನ ಏರು ಗತಿಯನ್ನು ಮುಂದುವರಿಸಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 160.69 ಅಂಕಗಳ ಏರಿಕೆಯೊಂದಿಗೆ 34,101.13 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 41.50 ಷಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 10,458.65 ಅಂಕಗಳ ಮಟ್ಟಕ್ಕೇರಿ ಕೊನೆಗೊಳಿಸಿತು. 

ಕಳೆದ ಐದು ದಿನಗಳ ನಿರಂತರ ಗೆಲುವಿನ ಹಾದಿಯಲ್ಲಿ ಸೆನ್ಸೆಕ್ಸ್‌ ಒಟ್ಟು 921.37 ಅಂಕಗಳನ್ನು ಸಂಪಾದಿಸಿದ್ದು ಇಂದು ಕೊನೆಗೊಂಡ ವಹಿವಾಟು ಮಟ್ಟವು ಕಳೆದ ಫೆಬ್ರವರಿಯಲ್ಲಿ ದಾಖಲಾದ ಮಟ್ಟದ ಬಳಿಕದ ಅತೀ ದೊಡ್ಡ ಮಟ್ಟ ಎನಿಸಿಕೊಂಡಿದೆ. 

ಇಂದಿನ ವಹಿವಾಟಿನಲ್ಲಿ ಟಿಸಿಎಸ್‌, ಇನ್‌ಫೋಸಿಸ್‌, ವಿಪ್ರೋ, ಎಚ್‌ಸಿಎಲ್‌ ಟೆಕ್‌, ಟೆಕ್‌ ಮಹೀಂದ್ರ ಶàರುಗಳು ಉತ್ತಮ ಮುನ್ನಡೆ ಕಂಡವು. ಡಾಲರ್‌ ಎದುರು ರೂಪಾಯಿ ಐದು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದ ಪ್ರಯುಕ್ತ ಡಾಲರ್‌ ಬಲದಲ್ಲಿ  ಟೆಕ್‌ ಶೇರುಗಳ ಧಾರಣೆ ಗಮನಾರ್ಹವಾಗಿ ಏರಿತು.

ಹಾಗಿದ್ದರೂ ಇಂದು ರಿಯಲ್ಟಿ, ಮೆಟಲ್‌, ಹೆಲ್ತ್‌ ಕೇರ್‌, ಪವರ್‌ ಮತ್ತು ಪಿಎಸ್‌ಯು ಕೌಂಟರ್‌ ಗಳಲ್ಲಿ ಶೇರುಗಳು ಮಾರಾಟದ ಒತ್ತಡವನ್ನು ಕಂಡವು. ಲಾಭ ನಗದೀಕರಣವೇ ಇದಕ್ಕೆ ಕಾರಣವಾಯಿತು. 

ವಿದೇಶಿ ಹೂಡಿಕೆದಾರರು ನಿನ್ನೆ ಗುರುವಾರದ ವಹಿವಾಟಿನಲ್ಲಿ 362.30 ಕೋಟಿ ರೂ.ಗಳ ಶೇರುಗಳನ್ನು ಖರೀದಿಸಿದರು. ಇದೇ ರೀತಿ ದೇಶೀಯ ಸಾಂಸ್ಥಿಕ ಹೂಡಿಕೆದಾರರು 111.82 ಕೋಟಿ ರೂ. ಶೇರುಗಳನ್ನು ಖರೀದಿಸಿದರು. 

ಭಾರತದ ಆರ್ಥಿಕತೆ (ಜಿಡಿಪಿ) 2017ರಲ್ಲಿ ದಾಖಲಿಸಿದ್ದ ಶೇ.6.2ರ ಬೆಳವಣಿಗೆಗೆ ಹೋಲಿಸಿದಲ್ಲಿ 2018ರಲ್ಲಿ ಅದು ಶೇ.7.6ರ ಮಟ್ಟಕ್ಕೆ ಬೆಳೆಯುವುದೆಂಬ ನಿರೀಕ್ಷೆಯನ್ನು ಮೂಡಿ ವ್ಯಕ್ತಪಡಿಸಿರುವುದು ಶೇರು ಮಾರುಕಟ್ಟೆಗೆ ಹೊಸ ಉತ್ಸಾಹ ತುಂಬಿದೆ.  

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.