ಮುಂಬಯಿ ಶೇರು 867 ಅಂಕಗಳ ಭಾರೀ ಕುಸಿತದ ಬಳಿಕ 188 ಅಂಕ ಏರಿಕೆ


Team Udayavani, Dec 18, 2017, 9:58 AM IST

Sensex headache-700.jpg

ಮುಂಬಯಿ : ಹಿಮಾಚಲ ಪ್ರದೇಶ ಮತ್ತು ಗುಜರಾತ್‌ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಆರಂಭಗೊಂಡ ಒಂದು ತಾಸಿನ ಅವಧಿಯಲ್ಲಿ ಪ್ರಧಾನ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಕತ್ತು ಕತ್ತಿನ ಸ್ಪರ್ಧೆಯೊಂದಿಗೆ ಸಮಬಲ ಹೋರಾಟದ ಲಕ್ಷಣ ಕಂಡು ಬಂದಿದ್ದು ಅಂತಿಮವಾಗಿ ವಿಜಯಲಕ್ಷ್ಮಿ ಯಾರಿಗೂ ಒಲಿದಾಳು ಎಂಬ ಅನ್ನಿಸಿಕೆ ಮೂಡುತ್ತಿರುವಂತೆಯೇ ಮುಂಬಯಿ ಶೇರು ಪೇಟೆ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 867 ಅಂಕಗಳ ಭಾರೀ ಕುಸಿತಕ್ಕೆ ಗುರಿಯಾಯಿತು.

ಮೇಲಾಗಿ ಡಾಲರ್‌ ಎದುರು ರೂಪಾಯಿ ವಿನಿಮಯ ದರ ಇಂದಿನ ಆರಂಭಿಕ ವಹಿವಾಟಿನಲ್ಲಿ 64.72 ಅಂಕಗಳ ಕುಸಿತಕ್ಕೆ ಗುರಿಯಾಗಿ 64.72 ರೂ. ಮಟ್ಟಕ್ಕೆ ಇಳಿದಿರುವ ಹಿನ್ನೆಲೆಯಲ್ಲಿ ಕೂಡ ಮುಂಬಯಿ ಶೇರು ಪೇಟೆಗೆ ದೊಡ್ಡ ಪ್ರಹಾರವಾಗಿ ಪರಿಣಮಿಸಿತು.

ಆದರೆ ಬೆಳಗ್ಗೆ 9.50ರ ಹೊತ್ತಿಗೆ ಮುಂಬಯಿ ಶೇರು ಪೇಟೆ ಬಹುವಾಗಿ ಚೇತರಿಸಿಕೊಂಡು ತನ ಆರಂಭಿಕ ನಷ್ಟವನ್ನು 137.29 ಅಂಕಗಳಿಗೆ ಗಮನಾರ್ಹವಾಗಿ ಇಳಿಸಿಕೊಂಡು 33,325.68 ಮಟ್ಟಕ್ಕೆ ತಲುಪಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 34.90 ಅಂಕಗಳ ನಷ್ಟಕ್ಕೆ ಗುರಿಯಾಗಿ 10,294.40 ಅಂಕಗಳ ಮಟ್ಟವನ್ನು ತಲುಪಿತು.

ಅನಂತರ 10.03 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ ತನ್ನ ಎಲ್ಲ ನಷ್ಟವನ್ನು ನಿವಾರಿಸಿಕೊಂಡದು 47.53 ಅಂಕಗಳ ಏರಿಕೆಯನ್ನು ಪಡೆದುಕೊಂಡು 33,510.50 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 18 ಅಂಕಗಳ ಏರಿಕೆಯೊಂದಿಗೆ 10,351.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಬೆಳಗ್ಗಿನ ವಹಿವಾಟಿನಲ್ಲಿಂದು ರಿಲಯನ್ಸ್‌, ಎಸ್‌ಬಿಐ, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಮಾರುತಿ ಸುಜುಕಿ, ಐಸಿಐಸಿಐ ಬ್ಯಾಂಕ್‌ ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.