ಹೆಚ್ಚಿದ ರಫ್ತು : ಗರಿಗೆದರಿದ ಮುಂಬಯಿ ಶೇರು, 107 ಅಂಕ ಜಿಗಿತ
Team Udayavani, Jun 16, 2017, 11:30 AM IST
ಮುಂಬಯಿ : ಮೇ ತಿಂಗಳ ರಫ್ತು ಅಂಕಿ ಅಂಶಗಳು ಉತ್ತೇಜನಕಾರಿಯಾಗಿರುವ ಕಾರಣಕ್ಕೆ ಗರಿಗೆದರಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 107 ಅಂಕಗಳ ಜಿಗಿತವನ್ನು ಸಾಧಿಸಿತು.
ಏಶ್ಯನ್ ಶೇರು ಪೇಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿರುವ ಹೊರತಾಗಿಯೂ ಮುನ್ನಡೆ ಕಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಬೆಳಗ್ಗೆ 11.30ರ ಹೊತ್ತಿಗೆ 47.22 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 31,122.95 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 16.90 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 9,594.95 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು.
ರಿಲಯನ್ಸ್, ಅರಂಬಿಂದೋ ಫಾರ್ಮಾ, ಎಸ್ ಬಿ ಐ, ಬಿಪಿಸಿಎಲ್, ಲೂಪಿನ್ ಶೇರುಗಳು ಇಂದು ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಭಾರ್ತಿ ಇನ್ಫ್ರಾಟೆಲ್, ಐಟಿಸಿ, ಐಡಿಯಾ ಸೆಲ್ಯುಲರ್, ಅರಬಿಂದೋ ಫಾರ್ಮಾ, ಟಾಟಾ ಮೋಟರ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು. ಲೂಪಿನ್, ವಿಪ್ರೋ, ಡಾ. ರೆಡ್ಡಿ, ಸಿಪ್ಲಾ, ಸನ್ ಫಾರ್ಮಾ ಶೇರುಗಳು ಮಾರಾಟದ ಒತ್ತಡಕ್ಕೆ ಗುರಿಯಾಗಿ ಹಿಂದುಳಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ