ಏಶ್ಯನ್ ಪೇಟೆಯಲ್ಲಿ ಉತ್ಸಾಹ: ಮುಂಬಯಿ ಶೇರು ಜಿಗಿತ
Team Udayavani, Sep 7, 2017, 10:43 AM IST
ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಹೊಸ ಉತ್ಸಾಹ ಕಂಡು ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ ನಿನ್ನೆಯ ನಷ್ಟವನ್ನು ಕೊಡವಿಕೊಂಡು 115 ಅಂಕಗಳ ನೆಗೆತವನ್ನು ಸಾಧಿಸಿತು.
ಬೆಳಗ್ಗೆ 10.45ರ ಹೊತ್ತಿಗೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 83.40 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 31,174.37 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರುಮಾರುಕಟ್ಟೆಯ ನಿಫ್ಟಿ ಸೂಚ್ಯಕ 29.50 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 9,945.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ರಿಲಯನ್ಸ್, ಎಸ್ ಬ್ಯಾಂಕ್, ಎಸ್ಬಿಐ, ಅರಬಿಂದೋ ಫಾರ್ಮಾ, ಐಟಿಸಿ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಈಶರ್ ಮೋಟರ್, ಹೀರೋ ಮೋಟೋ ಕಾರ್ಪ್, ಸನ್ ಫಾರ್ಮಾ, ಬ್ಯಾಂಕ್ ಆಫ್ ಬರೋಡ, ಎಸ್ ಬ್ಯಾಂಕ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು.
ಟಾಟಾ ಮೋಟರ್, ಬಿಪಿಸಎಲ್, ಎನ್ಟಿಪಿಸಿ, ಎಚ್ಡಿಎಫ್ಸಿ ಶೇರುಗಳು ಟಾಪ್ ಲೂಸರ್ ಎನಿಸಿಕೊಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್