ಬಜೆಟ್‌ ನಿರೀಕ್ಷೆ: Sensex ಭರ್ಜರಿ 665 ಅಂಕ ಜಂಪ್‌, ನಿಫ್ಟಿ 10,830


Team Udayavani, Jan 31, 2019, 10:44 AM IST

sensex-rally-700.jpg

ಮುಂಬಯಿ : ದೇಶ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿರುವಂತೆಯೇ ಕೇಂದ್ರದಲ್ಲಿನ ಎನ್‌ಡಿಎ ಸರಕಾರ ನಾಳೆ ಫೆ.1ರಂದು ಸಂಸತ್ತಿನಲ್ಲಿ ಮಂಡಿಸಲಿರುವ ಮಧ್ಯಾವಧಿ ಬಜೆಟ್‌ ಬಗ್ಗೆ ಭಾರೀ ನಿರೀಕ್ಷೆಗಳನ್ನು ಇರಿಸಿಕೊಂಡಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌,  ಇಂದು ಗುರುವಾರದ ವಹಿವಾಟನ್ನು 665.44 ಭರ್ಜರಿ ಏರಿಕೆಯೊಂದಿಗೆ 36,256.69 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 179.15 ಅಂಕಗಳ  ಉತ್ತಮ ಏರಿಕೆಯೊಂದಿಗೆ ದಿನದ ವಹಿವಾಟನ್ನು 10,830.95 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ತನ್ನ ಬಡ್ಡಿ ದರಗಳನ್ನು ಯಥಾವತ್ತಾಗಿ ಕಾಯ್ದುಕೊಂಡಿರುವುದು ಕೂಡ ಭಾರತ ಸೇರಿದಂತೆ ಜಾಗತಿಕ ಶೇರು ಪೇಟೆಗಳಲ್ಲಿ ಇಂದು ಕಂಡುಬಂದಿರುವ ತೇಜಿಗೆ ಕಾರಣವಾಗಿದೆ. 

ಇದೀಗ ಸಮಾಜದ ಎಲ್ಲ ವರ್ಗಗಳ, ಉದ್ಯಮಗಳ ಕಣ್ಣು  ನಾಳೆ ಶುಕ್ರವಾರ ಕೇಂದ್ರ ಹಣಕಾಸು ಸಚಿವ ಪಿಯೂಷ್‌ ಗೋಯಲ್‌ ಅವರು ಮಂಡಿಸಲಿರುವ 2019ರ ಮಧ್ಯಾವಧಿ ಬಜೆಟ್‌ ಮೇಲೆ ನೆಟ್ಟಿದೆ.

ಇಂದಿನ ಭರಾಟೆಯ ಶೇರು ಖರೀದಿಯಲ್ಲಿ ಎಕ್ಸಿಸ್‌ ಬ್ಯಾಂಕ್‌, ಟಾಟಾ ಮೋಟರ್‌, ಇನ್‌ಫೋಸಿಸ್‌, ಆರ್‌ಐಎಲ್‌, ಕೋಟಕ್‌ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಬಜಾಜ್‌ ಆಟೋ, ಎಸ್‌ಬಿಐ, ಇಂಡಸ್‌ ಇಂಡ್‌ ಬ್ಯಾಂಕ್‌, ಸನ್‌ ಫಾರ್ಮಾ, ಟಿಸಿಎಸ್‌ ಮತ್ತು ಎಚ್‌ಯುಎಲ್‌ ಶೇರುಗಳು ಶೇ.4.64ರಷ್ಟು ಏರಿ ಟಾಪ್‌ ಗೇನರ್‌ ಎನಿಸಿಕೊಂಡವು. 

ಟಾಪ್‌ ಲೂಸರ್‌ಗಳಾಗಿ ಕೋಲ್‌ ಇಂಡಿಯಾ, ಐಸಿಐಸಿಐ ಬ್ಯಾಂಕ್‌ , ಬಜಾಜ್‌ ಫಿನಾನ್ಸ್‌, ಎಚ್‌ಸಿಎಲ್‌ ಟೆಕ್‌ ಮತ್ತು ಎಸ್‌ ಬ್ಯಾಂಕ್‌ ಶೇರುಗಳು ಶೇ.2.56ರ ಕುಸಿತಕ್ಕೆ ಗುರಿಯಾದವು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು  2,703 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,421 ಶೇರುಗಳು ಮುನ್ನಡೆ ಸಾಧಿಸಿದವು; 1,143 ಶೇರುಗಳು ಹಿನ್ನಡೆಗೆ ಗುರಿಯಾದವು; 139 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.