ಜಿಎಸ್‌ಟಿ ದರ ಹೆಚ್ಚಳ ಕೇವಲ ವದಂತಿ : ಸಚಿವೆ ನಿರ್ಮಲಾ ಸೀತಾರಾಮನ್‌

Team Udayavani, Dec 14, 2019, 6:38 AM IST

ಹೊಸದಿಲ್ಲಿ: ‘ಜಿಎಸ್‌ಟಿ ದರಗಳನ್ನು ಹೆಚ್ಚಳ ಮಾಡುವ ವಿಚಾರ ನನ್ನ ಕಚೇರಿಗಿಂತ ಹೊರಗಡೆಯೇ ಹೆಚ್ಚು ಸದ್ದು ಮಾಡುತ್ತಿದೆ’ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಜಿಎಸ್‌ಟಿ ಸ್ಲಾಬ್‌ ದರಗಳಲ್ಲಿ ಗಣನೀಯವಾಗಿ ಹೆಚ್ಚಳ ವಾಗುವ ಬಗ್ಗೆ ಎದ್ದಿರುವ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಜಿಎಸ್‌ಟಿ ಮಂಡಳಿ ಸಭೆ ಡಿ.18ರಂದು ನಡೆಯಲಿದೆ. ಇದೇ ವೇಳೆ, ರಾಜ್ಯಗಳಿಗೆ ನೀಡಬೇಕಿ ರುವ ಜಿಎಸ್‌ಟಿ ಪರಿಹಾರ ಮೊತ್ತವನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಆಶ್ವಾಸನೆ ನೀಡಿದರು.

ಕುಸಿಯುತ್ತಿರುವ ಆರ್ಥಿಕತೆ ಮೇಲೆತ್ತುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಆಯಾ ಕಾಲಕ್ಕೆ ಅನುಗುಣವಾಗಿ ಸಮರ್ಪಕವಾದ ಪ್ಯಾಕೇಜ್‌ಗಳನ್ನು ನಾವು ಇತ್ತೀಚೆಗೆ ಘೋಷಿಸುತ್ತಾ ಬಂದಿದ್ದೇವೆ. ಆವಶ್ಯಕತೆಯಿದ್ದಾಗ ಮಾತ್ರ ಬೇಕಷ್ಟು ಆರ್ಥಿಕ ಪರಿಹಾರಗಳನ್ನು ಘೋಷಿಸಲಾಗುತ್ತದೆ’ ಎಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ