ಸುಳ್ಳು ಸುದ್ದಿ ನಂಬಬೇಡಿ; ಆದಾಯ ತೆರಿಗೆ ಪಾವತಿ ವಿಧಾನದಲ್ಲಿ ಯಾವ ಬದಲಾವಣೆ ಇಲ್ಲ: CBDT

Team Udayavani, Jul 17, 2019, 12:54 PM IST

ನವದೆಹಲಿ:ಆದಾಯ ತೆರಿಗೆ ಪಾವತಿ ವಿಧಾನ ತುಂಬಾ ಕಠಿಣಗೊಳಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ನೇರ ತೆರಿಗೆ ಕೇಂದ್ರೀಯ ಮಂಡಳಿ(ಸಿಬಿಡಿಟಿ) ಬುಧವಾರ ಸ್ಪಷ್ಟನೆ ನೀಡಿದ್ದು, ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ತಿಳಿಸಿದೆ.

2019ರ ಏಪ್ರಿಲ್ 1ರಂದು ಪ್ರಕಟಣೆ ಹೊರಡಿಸಿದ ನಂತರ ಐಟಿಆರ್ 2, ಐಟಿಆರ್ 3 ಸೇರಿದಂತೆ ಯಾವುದೇ ರೀತಿಯ ಆದಾಯ ತೆರಿಗೆ ಪಾವತಿಯ(ಐಟಿಆರ್) ನಮೂನೆಯಲ್ಲಿ ಯಾವ ಬದಲಾವಣೆ ಆಗಿಲ್ಲ ಎಂದು ಸಿಬಿಡಿಟಿ ಹೇಳಿದೆ.

ಆದಾಯ ತೆರಿಗೆದಾರರಿಗೆ ಹೆಚ್ಚಿನ ಅನುಕೂಲವಾಗುವ ನಿಟ್ಟಿನಲ್ಲಿ ಯುಟಿಲಿಟಿಯನ್ನು ಮಾತ್ರ ಮೇಲ್ದರ್ಜೆಗೇರಿಸಲಾಗಿದೆ. ಆದರೆ 2019ರ ಜುಲೈ 11ರಿಂದ ಐಟಿಆರ್ 2, ಐಟಿಆರ್ 3 ಪಾವತಿ ವಿಧಾನದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿದಾಡಿತ್ತು.

ಎಲ್ಲಾ ವಿಧದ ಐಟಿಆರ್ ಇ ಫೈಲಿಂಗ್ ಮಾಡಲು ಅನುಕೂಲವಾಗುವ ನಿಟ್ಟಿನಲ್ಲಿ ಯುಟಿಲಿಟಿ ಸಾಫ್ಟ್ ವೇರ್ ಅನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಇದರಿಂದಾಗಿ ಇ ಫೈಲಿಂಗ್ ಪ್ರಕ್ರಿಯೆಗೆ ಯಾವುದೇ ತೊಂದರೆಯಾಗುವುದಿಲ್ಲ. ಅಷ್ಟೇ ಅಲ್ಲ ಇ ಪಾವತಿಗೆ ಸಂಬಂಧಿಸಿದಂತೆ ನಿರಂತರವಾಗಿ ಗ್ರಾಹಕರು, ತೆರಿಗೆ ಪಾವತಿದಾರರಿಂದ ಫೀಡ್ ಬ್ಯಾಕ್ ತೆಗೆದುಕೊಳ್ಳಲಾಗುತ್ತಿದೆ ಎಂದು ಸಿಬಿಡಿಟಿ ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ