
ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆಯ ಆರೋಪದಲ್ಲಿ ಸಿಲುಕಿಕೊಂಡ ಅಮೆಜಾನ್
Team Udayavani, Jan 30, 2021, 1:31 PM IST

ನವದೆಹಲಿ: ಸರಕುಗಳ ವಿದೇಶಿ ವಿನಿಮಯಕ್ಕೆ ಸಂಬಂಧಿಸಿದಂತೆ ಭಾರತದ ನೀತಿ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದಲ್ಲಿ ವಿಶ್ವದ ಖ್ಯಾತ ಆನ್ ಲೈನ್ ಮಾರುಕಟ್ಟೆ ಮಳಿಗೆಯಾಗಿರುವ ಅಮೆಜಾನ್ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ.ವಿದೇಶಿ ವಿನಿಮಯ ಕಾಯ್ದೆ(FEMA)ಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ತನಿಖೆ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಈ ಕುರಿತಾಗಿ ಮಾಹಿತಿ ನೀಡಿರುವ ಅಮೆಜಾನ್ ವಕ್ತಾರರು ‘ಅಮೆಜಾನ್ ವಿರುದ್ಧವಾಗಿ ಜಾರಿ ನಿರ್ದೇಶನಾಲಯ ತನಿಖೆ ಕೈಗೊಂಡಿರುವ ಕುರಿತಾಗಿ ಯಾವುದೇ ಮಾಹಿತಿ ತಿಳಿದು ಬಂದಿಲ್ಲ’ ಎಂದಿದ್ದಾರೆ.
ಇದನ್ನೂ ಓದಿ:ಮಗನ ಮೇಲೆ ಬಾಂಬ್ ಎಸೆದು ಕೊಲ್ಲಲು ಹೋದ ತಂದೆಯೇ ಸ್ಫೋಟಕ್ಕೆ ಬಲಿ
ಕಾನೂನು ಬಾಹಿರವಾಗಿ ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್ ಗಳು ಹೂಡಿಕೆ ಮಾಡುವ ಮೂಲಕ FEMA ಮತ್ತು FDI ನಿಯಮಗಳನ್ನು ಉಲ್ಲಂಘಿಸಿದೆ ಎಂದು ಅಖಿಲ ಭಾರತ ವ್ಯಾಪಾರಿ ಒಕ್ಕೂಟವು ಆರೋಪಿಸಿದ್ದು, ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಪರಿಶೀಲನೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಫ್ಯೂಚರ್ ಗ್ರೂಪ್ ರಿಲಯನ್ಸ್ ನ 24713 ಕೋಟಿ ರೂ. ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆಜಾನ್ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಭವಿಷ್ಯದ ಚಿಲ್ಲರೆ ವ್ಯಾಪಾರವನ್ನು ನಿಯಂತ್ರಿಸುವ ಕ್ರಮಗಳನ್ನು ಅಮೆರಿಕಾ ಮೂಲದ ಕಂಪನಿಗಳು ಮಾಡುವ ಮೂಲಕ ವಿದೇಶಿ ವಿನಿಮಯ ಕಾಯ್ದೆಯನ್ನು ಉಲ್ಲಂಘಿಸುತ್ತಿದೆ ಎಂದು ಅಭಿಪ್ರಾಯ ಪಟ್ಟಿತ್ತು.
ಇದನ್ನೂ ಓದಿ: ಹೊಕ್ಕಾಡಿಗೋಳಿಯಲ್ಲಿ ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳಕ್ಕೆ ಸಂಭ್ರಮದ ಚಾಲನೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
