ಪಿಎಂ ಕಿಸಾನ್ ಸಮ್ಮಾನ್ ಯೋಜನೆ : ಎರಡು ಕಂತುಗಳ ಲಾಭ ಪಡೆಯಲು ಈ ಕೆಲಸ ಮಾಡಿ
Team Udayavani, Jun 10, 2021, 7:01 PM IST
ನವ ದೆಹಲಿ : ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಎಂಟನೇ ಕಂತಿನ ಹಣವನ್ನು ರೈತರ ಖಾತೆಗೆ ವರ್ಗಾಯಿಸಿದೆ.
ಅನೇಕ ರೈತರು ಈ ಯೋಜನೆಗೆ ತಮ್ಮನ್ನು ನೋಂದಾಯಿಸಿಕೊಂಡಿಲ್ಲ. ಹಾಗಾಗಿ ರೈತರಿಗೆ ಯೋಜನೆಯ ಲಾಭ ಪಡೆಯುವುದು ಸಾಧ್ಯವಾಗುತ್ತಿಲ್ಲ. ಯೋಜನೆಯ ದ್ವಿಗುಣ ಲಾಭವನ್ನು ಪಡೆಯಲು ಬಯಸುವುದಾದರೆ ಜೂನ್ 30 ರೊಳಗೆ ಈ ಯೋಜನೆಯಡಿಯಲ್ಲಿ ನಿಮ್ಮನ್ನು ನೋಂದಾಯಿಸಿಕೊಳ್ಳುವುದು ಅಗತ್ಯವಾಗಿದೆ.
ಇದನ್ನೂ ಓದಿ : ಪೆಟ್ರೋಲ್, ಡಿಸೇಲ್ ದರ ಹೆಚ್ಚಿಸಲು ಬಿಜೆಪಿ ನಾಯಕರಿಗೆ ನಾಚಿಕೆಯಾಗಲ್ವೇ : ಸಿದ್ದು ಕಿಡಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿಸಿಕೊಳ್ಳುವ ಎಲ್ಲಾ ಅರ್ಹತೆಯಿದ್ದರೆ, ಜೂನ್ 30 ರೊಳಗೆ ಈ ಯೋಜನೆಯಡಿ ನೊಂದಾಯಿಸಿಕೊಂಡರೆ, ನಿಮ್ಮ ಖಾತೆಗೆ 4,000 ರೂಪಾಯಿಗಳು ಕೇಂದ್ರ ಸರ್ಕಾರದಿಂದ ಜಮೆಯಾಗುತ್ತದೆ. ಅಂದರೆ ಎಂಟನೇ ಮತ್ತು ಒಂಬತ್ತನೇ ಕಂತಿನ ಹಣವನ್ನು ಒಟ್ಟಿಗೆ ನಿಮ್ಮ ಖಾತೆಗೆ ವರ್ಗಾಯಿಸಲಾಗುತ್ತದೆ.
3 ಕಂತುಗಳಲ್ಲಿ 6 ಸಾವಿರ ರೂ
ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಕೇಂದ್ರ ಸರ್ಕಾರ ಇಲ್ಲಿಯವರೆಗೆ ಸರ್ಕಾರ ಒಟ್ಟು 8 ಕಂತುಗಳ ಹಣವನ್ನು ರೈತರ ಖಾತೆಗೆ ವರ್ಗಾಯಿಸಿದೆ. ಈ ಯೋಜನೆಯಲ್ಲಿ ನೋಂದಣಿ ಮಾಡಬೇಕಾದರೆ, ರೈತರು ಮೊದಲು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಅಧಿಕೃತ ವೆಬ್ ಸೈಟ್ pmkisan.gov.in ಗೆ ಭೇಟಿ ನೀಡಬೇಕಾಗುತ್ತದೆ.
ಇದನ್ನೂ ಓದಿ : ದೆಹಲಿ ಗಲಭೆ: ಇಬ್ಬರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್