ಕೇಂದ್ರದಿಂದ ತಾಳೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ; ಬೇಡಿಕೆ ಲಕ್ಷ ಟನ್‌ ಹೆಚ್ಚುವ ನಿರೀಕ್ಷೆ

Team Udayavani, Nov 29, 2020, 6:13 AM IST

Palm-Oil

ಸಾಂದರ್ಭಿಕ ಚಿತ್ರ

ಕೇಂದ್ರ ಸರಕಾರ ಆಮದು ತೆರಿಗೆಯನ್ನು ಕಡಿತಗೊಳಿಸಿರುವುದರಿಂದ ಡಿಸೆಂಬರ್‌ನಿಂದ ತಾಳೆ ಎಣ್ಣೆ (ಪಾಮ್‌ ಆಯಿಲ್‌)ಯ ಆಮದು ಪ್ರಮಾಣ ತಿಂಗಳಿಗೆ ಒಂದು ಲಕ್ಷ ಟನ್‌ಗಳಷ್ಟು ಏರಿಕೆಯಾಗುವ ನಿರೀಕ್ಷೆ ಇದೆ. ತಾಳೆ ಎಣ್ಣೆ ಇತರ ಖಾದ್ಯ ತೈಲಗಳಿಗಿಂತ ಅಗ್ಗವಾಗಲಿದ್ದು, ಸಹಜವಾಗಿ ಬೇಡಿಕೆ ಹೆಚ್ಚಾಗುವ ನಿರೀಕ್ಷೆ ಇದೆ.

1 ಲಕ್ಷ ಟನ್‌ಗೆ ಬೇಡಿಕೆ ಸಾಧ್ಯತೆ: ಪಾಮ್‌ ಆಯಿಲ್‌ ಆಮದು ಡಿಸೆಂಬರ್‌ನಿಂದ ಪ್ರತೀ ತಿಂಗಳು ಸುಮಾರು ಒಂದು ಲಕ್ಷ ಟನ್‌ಗಳಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಇದೇ ವೇಳೆ ಅಮೆರಿಕದ ಸೋಯಾಬೀನ್‌ ಆಯಿಲ್‌ ಆಮದು ಪ್ರಮಾಣ ಮುಂಬರುವ ಜನವರಿಯಿಂದ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಬೇಡಿಕೆ ಕುಸಿದಿತ್ತು: ಕೋವಿಡ್‌-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹೊಟೇಲ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಬೀಗ ಜಡಿದ ಕಾರಣ ಪಾಮ್‌ ಆಯಿಲ್‌ ಆಮದು ಅಕ್ಟೋಬರ್‌ 31ರ ವೇಳೆಗೆ ಶೇ. 23ರಷ್ಟು ಕುಸಿದು 7.2 ಮಿಲಿಯನ್‌ ಟನ್‌ಗಳಿಗೆ ತಲುಪಿತ್ತು. ಹೀಗಾಗಿ 2020-21ರಲ್ಲಿ ಶೇ. 25ರಷ್ಟು ಬೇಡಿಕೆ ಹೊಂದಿ ಈಗಿರುವ 7.2 ಮಿಲಿಯನ್‌ ಟನ್‌ಗಳಿಂದ 9 ಮಿಲಿಯನ್‌ ಟನ್‌ಗಳಿಗೆ ಏರಿಕೆಯಾಗುವ ನಿರೀಕ್ಷೆ ಇದೆ.

ತಾಳೆ ಎಣ್ಣೆ ಮೇಲೆ ಮಮತೆ ಯಾಕೆ?: ಆಮದು ಸುಂಕ ಕಡಿತದಿಂದ ಮಲೇಷ್ಯಾ ಮತ್ತು ಇಂಡೋನೇಷ್ಯಾ ಹೆಚ್ಚಿನ ಪ್ರಯೋಜನ ಪಡೆಯುತ್ತವೆ. ಆದರೆ ಈ ಎರಡು ರಾಷ್ಟ್ರಗಳು ಭಾರತದಿಂದ ಸಕ್ಕರೆ ಮತ್ತು ಅಕ್ಕಿಯನ್ನು ಆಮದು ಮಾಡಲಿವೆ. ಈ ಕುರಿತ ಒಪ್ಪಂದಗಳಿಗೆ ಈ ರಾಷ್ಟ್ರಗಳು ಮುಂದಾಗಿರುವುದರಿಂದ ಆಮದು ಸುಂಕ ಕಡಿತ ಉತ್ತಮ ತಂತ್ರವೇ ಆಗಿದೆ. ಆಗ್ನೇಯ ಏಷ್ಯಾದಲ್ಲಿ ವಿಶೇಷವಾಗಿ ಮಲೇಷ್ಯಾ ಮತ್ತು ಇಂಡೋನೇಷ್ಯಾದಲ್ಲಿ ಭಾರತೀಯ ಸಕ್ಕರೆಗೆ ಉತ್ತಮ ಬೇಡಿಕೆಯಿದೆ. ಥೈಲ್ಯಾಂಡ್‌ ಮತ್ತು ವಿಯೆಟ್ನಾಂನಂತಹ ದೇಶಗಳಲ್ಲಿನ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಮಲೇಷ್ಯಾ ಮತ್ತು ಇಂಡೋನೇಷ್ಯಾ ಭಾರತೀಯ ಅಕ್ಕಿಯನ್ನು ಖರೀದಿಸಲು ಹೆಚ್ಚಿನ ಆಸಕ್ತಿ ತೋರಿವೆ.

ಶೇ. 40ರಷ್ಟು ಪಾಲು: ಪಾಮ್‌ ಆಯಿಲ್‌ ಭಾರತದ ಒಟ್ಟು ಖಾದ್ಯ ತೈಲ ಬಳಕೆಯ ಶೇ. 40ರಷ್ಟನ್ನು ತುಂಬುತ್ತದೆ. ಕಚ್ಚಾ ತೈಲ ಮತ್ತು ಚಿನ್ನದ ಬಳಿಕ ತಾಳೆ ಎಣ್ಣೆಯು ಗ್ರಾಹಕ ಬಳಕೆಯ 3ನೇ ಅತೀ ದೊಡ್ಡ ಆಮದು ಸರಕಾಗಿದೆ. ಜನವರಿಯಲ್ಲಿ ಅಸೋಸಿಯೇಷನ್‌ ಆಫ್ ಸೌತ್‌ ಈಸ್ಟ್‌ ಏಷ್ಯನ್‌ ನೇಶನ್ಸ್‌ (ಆಸಿಯಾನ್‌) ದೇಶಗಳಿಂದ ಆಮದು ಮಾಡಿಕೊಳ್ಳಲು ಕಚ್ಚಾ ತಾಳೆ ಎಣ್ಣೆಯ ಮೇಲಿನ ಸುಂಕವನ್ನು ಶೇ. 40ರಿಂದ ಶೇ. 37.5ಕ್ಕೆ ಕಡಿತಗೊಳಿಸಿತ್ತು. ಕಳೆದ ಒಂದು ವರ್ಷದಲ್ಲಿ ತಾಳೆ, ಸೋಯಾಬೀನ್‌ ಮತ್ತು ಸೂರ್ಯಕಾಂತಿ ಎಣ್ಣೆಯ ಬೆಲೆ ಶೇ. 20-30ರಷ್ಟು ಹೆಚ್ಚಾಗಿತ್ತು.

ಭಾರತ ನಂಬರ್‌ 1
ತಾಳೆ ಎಣ್ಣೆ ಆಮದಿನಲ್ಲಿ ಭಾರತ ವಿಶ್ವದಲ್ಲಿಯೇ ಅಗ್ರಸ್ಥಾನದಲ್ಲಿದೆ. ಭಾರತ ಮಲೇಷ್ಯಾದಿಂದ ಭಾರೀ ಪ್ರಮಾಣದಲ್ಲಿ ತಾಳೆ ಎಣ್ಣೆ ಖರೀದಿಸುತ್ತಿದ್ದು ಕೇಂದ್ರದ ಈ ನಿರ್ಧಾರದಿಂದ ಸಹಜವಾಗಿಯೇ 8 ವರ್ಷಗಳ ಬಳಿಕ ಮಲೇಷ್ಯಾಕ್ಕೆ ಹೆಚ್ಚಿನ ಉತ್ತೇಜನ ಲಭಿಸಿದಂತಾಗಿದೆ. ಹಣದುಬ್ಬರದ ನಡುವೆ ಹೆಚ್ಚುತ್ತಿರುವ ಆಹಾರ ಪದಾರ್ಥಗಳ ಬೆಲೆಗಳಿಗೆ ಕಡಿವಾಣ ಹಾಕಲು ಭಾರತವು ಕಚ್ಚಾ ತಾಳೆ ಎಣ್ಣೆ (ಸಿಪಿಒ) ಮೇಲಿನ ಆಮದು ತೆರಿಗೆಯನ್ನು ಶೇ. 37.5ರಿಂದ ಶೇ. 27.5ಕ್ಕೆ ಇಳಿಸಿದೆ.

ಎಲ್ಲೆಲ್ಲಿಂದ ಆಮದು
ದಕ್ಷಿಣ ಏಷ್ಯಾದ ದೇಶವು ತಾಳೆ ಎಣ್ಣೆಯನ್ನು ಮುಖ್ಯವಾಗಿ ಇಂಡೋನೇಷ್ಯಾ ಮತ್ತು ಮಲೇಷ್ಯಾದಿಂದ ಹೆಚ್ಚಾಗಿ ಆಮದು ಮಾಡುತ್ತವೆ. ಇತರ ತೈಲಗಳಾದ ಸೋಯಾಬೀನ್‌ ಮತ್ತು ಸೂರ್ಯಕಾಂತಿ ಎಣ್ಣೆಯನ್ನು ಅರ್ಜೆಂಟೀನಾ, ಬ್ರೆಜಿಲ…, ಉಕ್ರೇನ್‌ ಮತ್ತು ರಷ್ಯಾದಿಂದ ಆಮದು ಮಾಡಿಕೊಳ್ಳಲಾಗುತ್ತದೆ.

ಬೆಲೆ ಏರಿಕೆ ಬಿಸಿ ತಟ್ಟಲಿದೆಯೇ?
ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಅಗತ್ಯ ವಸ್ತುಗಳು ಸೇರಿದಂತೆ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುತ್ತಿದೆ. ಗ್ರಾಹಕ ಬಳಕೆ ವಸ್ತುಗಳ ಬೆಲೆಗಳು ಶೇ. 3ರಿಂದ ಶೇ. 5ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ. ಡಿಸೆಂಬರ್‌ನಿಂದ ಗೃಹೋಪಯೋಗಿ ವಸ್ತುಗಳಾದ ವಾಷಿಂಗ್‌ ಮೆಷಿನ್‌, ರೆಫ್ರಿಜರೇಟರ್‌, ಟೆಲಿವಿಷನ್‌ ಸೆಟ್‌ಗಳು ಮತ್ತು ಏರ್‌ ಕಂಡೀಷನರ್‌ಗಳ ಬೆಲೆಯಲ್ಲಿ ಶೇ. 3ರಿಂದ 5ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.