ಭಾರತಕ್ಕೆ 50-60 ಲಕ್ಷ ಕೋಟಿ ವಿದೇಶಿ ಹೂಡಿಕೆಯ ಅಗತ್ಯವಿದೆ: ನಿತಿನ್ ಗಡ್ಕರಿ
Team Udayavani, Jul 3, 2020, 6:26 AM IST
ಹೊಸದಿಲ್ಲಿ: ಕೋವಿಡ್ 19 ಲಾಕ್ಡೌನ್ನಿಂದ ತತ್ತರಿಸಿರುವ ಭಾರತದ ಆರ್ಥಿಕತೆಯ ಸುಧಾರಣೆಗೆ 50-60 ಲಕ್ಷ ಕೋಟಿ ರೂ.ಗಳಷ್ಟು ನೇರ ವಿದೇಶಿ ಬಂಡವಾಳ ಹೂಡಿಕೆಯ ಅಗತ್ಯವಿದೆ ಎಂದು ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಮತ್ತು ಎಂಎಸ್ಎಂಇ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಲಾಕ್ಡೌನ್ನಿಂದಾಗಿ ದೇಶದ ಆರ್ಥಿಕ ಚಟುವಟಿಕೆಗಳು ಕುಂಠಿತಗೊಂಡಿವೆ. ಹೀಗಾಗಿ, ದೇಶದ ಆರ್ಥಿಕತೆಯ ಚೇತರಿಕೆಗೆ ಹಣದ ಹರಿವು ಬೇಕು. ಹಣದ ಹರಿವಿಲ್ಲದೆ ನಮ್ಮ ಆರ್ಥಿಕತೆಯ ಚಕ್ರ ವೇಗವಾಗುವುದಿಲ್ಲ.
ಈ ನಿಟ್ಟಿನಲ್ಲಿ ಭಾರತಕ್ಕೆ 50-60 ಲಕ್ಷ ಕೋಟಿ ರೂ.ಗಳಷ್ಟು ನೇರ ವಿದೇಶಿ ಬಂಡವಾಳ ಹೂಡಿಕೆಯ ಅಗತ್ಯವಿದೆ. ಇದರಿಂದ ದೇಶಕ್ಕೆ ಪ್ರಯೋಜನವಾಗಲಿದೆ.
ಈ ಹಣವನ್ನು ಮುಖ್ಯವಾಗಿ ಮೂಲಸೌಕರ್ಯ ಯೋಜನೆಗಳು ಹಾಗೂ ಎಂಎಸ್ಎಂಇ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು) ವಲಯಗಳಲ್ಲಿ ಹೂಡಿಕೆ ಮಾಡಲು ದುಬಾೖ ಹಾಗೂ ಅಮೆರಿಕದ ಬಂಡವಾಳ ಹೂಡಿಕೆದಾರರ ಜತೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.