ಶೇ.75 ಪಿಎಫ್ ಹಿಂಪಡೆಯಲು ಅವಕಾಶ
Team Udayavani, Jun 27, 2018, 11:09 AM IST
ನವದೆಹಲಿ: ಉದ್ಯೋಗರಹಿತನಾದ ವ್ಯಕ್ತಿ 30 ದಿನಗಳ ಬಳಿಕ ಭವಿಷ್ಯ ನಿಧಿಯಿಂದ ಶೇ.75ರಷ್ಟು ಮೊತ್ತವನ್ನು ವಿಥ್‌ಡ್ರಾ ಮಾಡಲು ಅವಕಾಶ ಕಲ್ಪಿಸುವ ಪ್ರಸ್ತಾಪಕ್ಕೆ ಭವಿಷ್ಯ ನಿಧಿ ಮಂಡಳಿ ಅನುಮತಿ ನೀಡಿದೆ. ಬಾಕಿ ಉಳಿದ ಶೇ.25ರಷ್ಟು ಮೊತ್ತವನ್ನು ಎರಡು ತಿಂಗಳ ಬಳಿಕ ಅಂತಿಮ ಲೆಕ್ಕಾಚಾರದ ನಂತರ ಪಡೆಯಲೂ ಅವಕಾಶ ನೀಡಲಾಗಿದೆ.
ಮಂಗಳವಾರ ನಡೆದ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ತಿಳಿಸಿದ್ದಾರೆ.
ಸದ್ಯದ ನಿಯಮ ಪ್ರಕಾರ, ಉದ್ಯೋಗ ತೊರೆದ 2 ತಿಂಗಳ ಬಳಿಕವೇ ಭವಿಷ್ಯ ನಿಧಿ ಮೊತ್ತವನ್ನು ವಿಥ್‌ಡ್ರಾ ಮಾಡಲು ಅವಕಾಶ ಇದೆ. ಹೊಸ ನಿಯಮದಂತೆ, ಖಾತೆದಾರರಿಗೆ ಭವಿಷ್ಯ ನಿಧಿ ಮಂಡಳಿಯಲ್ಲಿ ಖಾತೆ ಮುಂದುವರಿಸಲೂ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಹೊಸತಾಗಿ ಉದ್ಯೋಗ ಪಡೆದುಕೊಂಡ ಬಳಿಕ ಅದು ನೆರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ