ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ; ಹೂಡಿಕೆದಾರರಿಗೆ ನಷ್ಟ
ಏಷ್ಯನ್ ಪೇಂಟ್ಸ್, ಪವರ್ ಗ್ರಿಡ್ ಮತ್ತು ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಲಾಭಗಳಿಸಿದೆ.
Team Udayavani, Nov 22, 2021, 4:53 PM IST
ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ವಹಿವಾಟು ಮತ್ತು ವಿದೇಶಿ ಬಂಡವಾಳ ಹೂಡಿಕೆಯ ಒಳಹಿರಿವಿನ ಪರಿಣಾಮ ಸೋಮವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಬರೋಬ್ಬರಿ 1,170 ಅಂಕಗಳಷ್ಟು ನಷ್ಟ ಕಂಡಿದ್ದು, ಹೂಡಿಕೆದಾರರಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ.
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 1,170.12 ಅಂಕ ಇಳಿಕೆಯಾಗಿದ್ದು, 58,465.89 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 348.25 ಅಂಕ ಕುಸಿತದೊಂದಿಗೆ 17,416.55 ಅಂಕಗಳೊಂದಿಗೆ ವಹಿವಾಟು ಕೊನೆಗೊಂಡಿದೆ.
ರಿಲಯನ್ಸ್ ಇಂಡಸ್ಟ್ರೀ ಷೇರು ಶೇ.4ರಷ್ಟು ನಷ್ಟ ಕಂಡಿದೆ. ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಎನ್ ಟಿಪಿಸಿ, ಎಸ್ ಬಿಐ ಮತ್ತು ಟೈಟಾನ್ ಷೇರುಗಳು ನಷ್ಟಕ್ಕೆ ಗುರಿಯಾಗಿದೆ. ಮತ್ತೊಂದೆಡೆ ಭಾರ್ತಿ ಏರ್ ಟೆಲ್, ಏಷ್ಯನ್ ಪೇಂಟ್ಸ್, ಪವರ್ ಗ್ರಿಡ್ ಮತ್ತು ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಲಾಭಗಳಿಸಿದೆ.
ಜಾಗತಿಕ ಮಟ್ಟದಲ್ಲಿ ಹಾಂಗ್ ಕಾಂಗ್ ಷೇರು ಮಾರುಕಟ್ಟೆ ಸೆನ್ಸೆಕ್ಸ್ ಕುಸಿತಗೊಂಡಿದ್ದು, ಟೋಕಿಯೋ, ಶಾಂಘೈ ಮತ್ತು ಸಿಯೋಲ್ ಷೇರುಮಾರುಕಟ್ಟೆ ಸೆನ್ಸೆಕ್ಸ್ ಏರಿಕೆಯೊಂದಿಗೆ ವಹಿವಾಟು ನಡೆಸಿದೆ.