ಮುಂಬಯಿ ಷೇರುಪೇಟೆ; ಮತ್ತೆ 900ಕ್ಕೂ ಅಧಿಕ ಅಂಕ ಕುಸಿತ, ಹೂಡಿಕೆದಾರರ 5 ಲಕ್ಷ ಕೋಟಿ ರೂ. ನಷ್ಟ
ಎನ್ ಎಸ್ ಇ ನಿಫ್ಟಿ 234.05 ಅಂಕಗಳಷ್ಟು ಇಳಿಕೆಯಾಗಿದ್ದು, 15,933.05 ಅಂಕಗಳಲ್ಲಿ ವಹಿವಾಟು ನಡೆದಿದೆ.
Team Udayavani, May 12, 2022, 11:55 AM IST
ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ನೀರಸ ವಹಿವಾಟಿನ ಪರಿಣಾಮ ಗುರುವಾರ (ಮೇ 12) ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 953.92 ಅಂಕಗಳಷ್ಟು ಕುಸಿತದೊಂದಿಗೆ ವಹಿವಾಟು ಮುಂದುವರಿದಿದೆ. ಭಾರೀ ಪ್ರಮಾಣದ ಕುಸಿತದಿಂದ 5 ಲಕ್ಷ ಕೋಟಿ ರೂಪಾಯಿ ಹೂಡಿಕೆದಾರರ ಹಣ ನಷ್ಟವಾದಂತಾಗಿದೆ.
ಇದನ್ನೂ ಓದಿ:ಕೆ.ಎಲ್. ರಾಹುಲ್-ಅಥಿಯಾ ಶೆಟ್ಟಿ ಮದುವೆ ವದಂತಿ: ಸುನೀಲ್ ಶೆಟ್ಟಿ ಹೇಳಿದ್ದೇನು?
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 953.92 ಅಂಕಗಳಷ್ಟು ಕುಸಿತ ಕಂಡಿದ್ದು, 53,133.38 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 234.05 ಅಂಕಗಳಷ್ಟು ಇಳಿಕೆಯಾಗಿದ್ದು, 15,933.05 ಅಂಕಗಳಲ್ಲಿ ವಹಿವಾಟು ನಡೆದಿದೆ.
ಸೆನ್ಸೆಕ್ಸ್, ನಿಫ್ಟಿ ಇಳಿಕೆಯಿಂದ ಆಲ್ಟ್ರಾ ಟೆಕ್ ಸಿಮೆಂಟ್, ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್, ಮಹೀಂದ್ರ ಆ್ಯಂಡ್ ಮಹೀಂದ್ರ, ಇಂಡಸ್ ಇಂಡ್ ಬ್ಯಾಂಕ್, ಎಚ್ ಡಿಎಫ್ ಸಿ ಬ್ಯಾಂಕ್, ಬಜಾಜ್ ಫಿನ್ ಸರ್ವ್ ಮತ್ತು ಎಲ್ ಆ್ಯಂಡ್ ಟಿ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಪವರ್ ಗ್ರಿಡ್ ಷೇರು ಮಾತ್ರ ಲಾಭಗಳಿಸಿದೆ. ಇನ್ನುಳಿದಂತೆ ಟೋಕಿಯೋ, ಹಾಂಗ್ ಕಾಂಗ್ ಮತ್ತು ಸಿಯೋಲ್ ಷೇರುಮಾರುಕಟ್ಟೆ ಸೆನ್ಸೆಕ್ಸ್ ಇಳಿಕೆ ಕಂಡಿದ್ದು, ಶಾಂಘೈ ಷೇರುಪೇಟೆ ಸೆನ್ಸೆಕ್ಸ್ ಅಲ್ಪ ಪ್ರಮಾಣದ ಏರಿಕೆಯಲ್ಲಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ