ಒಪೆಕ್ – ರಷ್ಯಾ ನಡುವಿನ ಸಭೆ ಮುಂದಕ್ಕೆ
Team Udayavani, Apr 6, 2020, 8:16 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಾಸ್ಕೊ: ತೈಲ ಉತ್ಪಾದನೆ ಕಡಿತ ಕುರಿತಂತೆ ಚರ್ಚಿಸಲು ಕರೆದಿದ್ದ ಸಭೆಯನ್ನು ಒಪಿಇಸಿ ಮತ್ತು ರಷ್ಯಾ ಏ.9ರವರೆಗೆ ಮುಂದೂಡಿವೆ. ಕಚ್ಚಾ ತೈಲದ ಬೆಲೆ ಕುಸಿಯಲು ಯಾರು ಕಾರಣ ಎಂಬ ಕುರಿತಂತೆ ಸೌದಿ ಅರೇಬಿಯಾ ಮತ್ತು ರಷ್ಯಾ ನಡುವೆ ಸಾಕಷ್ಟು ಭಿನ್ನಾಭಿಪ್ರಾಯ ಇರುವ ಕಾರಣ ಸಭೆಯನ್ನು ಮುಂದೂಡಿರುವುದಾಗಿ ಒಪಿಇಸಿ ಮೂಲಗಳು ತಿಳಿಸಿವೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಡ ಹೇರಿದ ಕಾರಣದಿಂದಲೇ ಈ ಸಭೆ ಮುಂದೂಡಲ್ಪಟ್ಟಿದೆ ಎಂದು ಹೇಳಲಾಗಿದೆ. ವಿವಿಧ ದೇಶಗಳಲ್ಲಿ ಲಾಕ್‌ಡೌನ್ ಜಾರಿ, ಒಪೆಕ್-ರಷ್ಯಾ ನಡುವಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾ.30ರಂದು ಕಚ್ಚಾ ತೈಲದ ಬೆಲೆ 18 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು.
ಪ್ರಧಾನ್ ಚರ್ಚೆ: ಕೋವಿಡ್ ವೈರಸ್ ಸೋಂಕಿನಿಂದಾಗಿ ಉಂಟಾಗಿರುವ ಇಂಧನದ ಬೇಡಿಕೆ ಕುಸಿತಕ್ಕೆ ಸಂಬಂಧಿಸಿದಂತೆ ತೈಲ ಸಚಿವ ಧರ್ಮೇಂದ್ರ ಪ್ರಧಾನ್, ಅಮೆರಿಕದ ಇಂಧನ ಇಲಾಖೆ ಕಾರ್ಯದರ್ಶಿ ಡಾನ್ ಬ್ರೌಲೆಟ್ ಜತೆ ಭಾನುವಾರ ಚರ್ಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ, ಸೋಂಕಿನ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಏರಿಳಿತವಾಗುತ್ತಿದ್ದು, ಇದು ಎರಡೂ ದೇಶಗಳಿಗೆ ತಲೆನೋವಾಗಿದೆ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ