ಕೋವಿಡ್-19 ಎಫೆಕ್ಟ್: ಶೇರುಪೇಟೆ ಸೂಚ್ಯಂಕ 2000 ಅಂಕ ಕುಸಿತ, ಕೋಟ್ಯಂತರ ರೂ. ನಷ್ಟ
ಇಂದು ಶೇರುಪೇಟೆಯ ವಹಿವಾಟು ಆರಂಭಗೊಳ್ಳುತ್ತಿದ್ದಂತೆಯೇ ಸೆನ್ಸೆಕ್ಸ್ ಹಾಗೂ ನಿಫ್ಟಿ ಭಾರೀ ಪ್ರಮಾಣದ ಕುಸಿತ ಕಂಡಿದೆ.
Team Udayavani, Mar 16, 2020, 11:44 AM IST
Representative Image
ಮುಂಬೈ:ಮಾರಕ ಕೊರೊನಾ ವೈರಸ್ ಭೀತಿ ಮುಂದುವರಿದಿರುವ ನಡುವೆಯೇ ಮುಂಬೈ ಶೇರುಮಾರುಕಟ್ಟೆ ವಹಿವಾಟು ಸೋಮವಾರವೂ ಕೂಡಾ ಭರ್ಜರಿ ಕುಸಿತ ಕಾಣುವ ಮೂಲಕ ಹೂಡಿಕೆದಾರರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಇಂದು ಶೇರುಪೇಟೆಯ ವಹಿವಾಟು ಆರಂಭಗೊಳ್ಳುತ್ತಿದ್ದಂತೆಯೇ ಸೆನ್ಸೆಕ್ಸ್ ಹಾಗೂ ನಿಫ್ಟಿ ಭಾರೀ ಪ್ರಮಾಣದ ಕುಸಿತ ಕಂಡಿದೆ. ಮುಂಬೈ ಶೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 2,112 ಅಂಕಗಳಷ್ಟು ಕುಸಿತ ದಾಖಲಿಸಿದ್ದು, 31,990.92 ಅಂಕಗಳ ವಹಿವಾಟಿಗೆ ಸಾಕ್ಷಿಯಾಗಿದೆ.
ರಾಷ್ಟ್ರೀಯ ಶೇರುಮಾರುಕಟ್ಟೆ ನಿಫ್ಟಿ ಸೂಚ್ಯಂಕ 600 ಅಂಕಗಳೊಂದಿಗೆ 9,500 ಅಂಕಗಳಿಗೆ ಕುಸಿತ ಕಂಡಿದೆ ಎಂದು ವರದಿ ತಿಳಿಸಿದೆ.
ಕೋವಿಡ್ 19 ವೈರಸ್ ಜಾಗತಿಕವಾಗಿ ವಾಣಿಜ್ಯ ನಗರಿಗಳಲ್ಲಿ ಹಬ್ಬಿರುವ ಪರಿಣಾಮ ಆರ್ಥಿಕವಾಗಿ ಹೊಡೆತ ಬಿದ್ದಿದ್ದು, ಇದರಿಂದಾಗಿ ಶೇರು ವಹಿವಾಟು ಕುಸಿತ ಕಂಡಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊರೊನಾ ವೈರಸ್ ಸೋಂಕಿತರ ಹಾಗೂ ಸಾವಿನ ಸಂಖ್ಯೆ ಇಳಿಮುಖವಾದ ನಂತರವೇ ಶೇರುಪೇಟೆ ವಹಿವಾಟು ಯಥಾಸ್ಥಿತಿಗೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್