ಭಾರೀ ಕುಸಿತ ಕಂಡಿದ್ದ ಮುಂಬೈ ಷೇರುಪೇಟೆ ಸೆನ್ಸೆಕ್ಸ್ 581 ಅಂಕ ಏರಿಕೆ, ನಿಫ್ಟಿ ಜಿಗಿತ
ನಿಫ್ಟಿ ಕೂಡಾ 150.03 ಅಂಕಗಳಷ್ಟು ಏರಿಕೆಯಾಗಿದ್ದು, 16,013.5 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ.
Team Udayavani, Mar 8, 2022, 4:41 PM IST
ಮುಂಬಯಿ: ಸತತವಾಗಿ ಭಾರೀ ಕುಸಿತ ಕಾಣುತ್ತಿದ್ದ ಮುಂಬಯಿ ಷೇರುಪೇಟೆ ವಹಿವಾಟು ಮಂಗಳವಾರ (ಮಾರ್ಚ್ 08) ಸಂವೇದಿ ಸೂಚ್ಯಂಕ 581.3 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ತಂತ್ರಜ್ಞಾನದ ಸಮರ್ಪಕ ಬಳಕೆ ಆತ್ಮನಿರ್ಭರತೆಗೆ ಆದ್ಯತೆ: ನಿರ್ಮಲಾ ಸೀತಾರಾಮನ್
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 581.03 ಅಂಕಗಳಷ್ಟು ಏರಿಕೆಯೊಂದಿಗೆ 53,424.01 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 150.03 ಅಂಕಗಳಷ್ಟು ಏರಿಕೆಯಾಗಿದ್ದು, 16,013.5 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯ ಪರಿಣಾಮ ಇಂಡಿಯನ್ ಆಯಿಲ್, ಸನ್ ಫಾರ್ಮಾ, ಟಾಟಾ ಕನ್ಸೂಮರ್, ಸಿಪ್ಲಾ, ಟಿಸಿಎಸ್, ಟೆಕ್ ಮಹೀಂದ್ರ ಮತ್ತು ಡಾ.ರೆಡ್ಡೀಸ್ ಷೇರುಗಳು ಶೇ.2.8ರಿಂದ ಶೇ.4.2ರಷ್ಟು ಲಾಭಗಳಿಸಿದೆ.
ಮತ್ತೊಂದೆಡೆ ಒಎನ್ ಜಿಸಿ, ಟಾಟಾ ಸ್ಟೀಲ್, ಹಿಂಡಲ್ಕೋ, ಜೆಎಸ್ ಡಬ್ಲ್ಯು ಸ್ಟೀಲ್, ಬ್ರಿಟಾನಿಯಾ, ಯುಪಿಎಲ್ ಮತ್ತು ನೆಸ್ಲೆ ಷೇರುಗಳು ನಷ್ಟ ಕಂಡಿದೆ. ಅಲ್ಲದೇ ಇನ್ಫೋಸಿಸ್, ಟಿಸಿಎಸ್, ಐಸಿಐಸಿಐ ಬ್ಯಾಂಕ್ ಮತ್ತು ಎಚ್ ಡಿಎಫ್ ಸಿ ಷೇರುಗಳು ಭಾರೀ ಲಾಭಗಳಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್