ಶೈಕ್ಷಣಿಕ ಸಾಲ ಮನ್ನಾ ಆಗಲಿದೆಯಾ? ಲೋಕಸಭೆಗೆ ನಿರ್ಮಲಾ ಸೀತಾರಾಮನ್ ನೀಡಿದ ಉತ್ತರ ಇದು

Team Udayavani, Dec 10, 2019, 1:42 PM IST

ಚೆನ್ನೈ/ನವದೆಹಲಿ: ವಿದ್ಯಾರ್ಥಿಗಳು ಬ್ಯಾಂಕ್ ನಿಂದ ಪಡೆದಿರುವ ಶೈಕ್ಷಣಿಕ ಸಾಲ ಮನ್ನಾದ ಕುರಿತು ಯಾವುದೇ ಪ್ರಸ್ತಾಪ ಕೇಂದ್ರದ ಮುಂದೆ ಇಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದೆ.

ದೇಶದ ಆರ್ಥಿಕ ಅಭಿವೃದ್ಧಿ ಕುಸಿಯುತ್ತಿರುವ ಸಂದರ್ಭದಲ್ಲಿಯೇ ನಿರುದ್ಯೋಗ ಸಮಸ್ಯೆಯೂ ಏರಿಕೆಯಾಗುತ್ತಿದೆ. ಏತನ್ಮಧ್ಯೆ ಬ್ಯಾಂಕ್ ಗಳಿಂದ ಪಡೆದಿರುವ ಶೈಕ್ಷಣಿಕ ಸಾಲ ಮನ್ನಾ ಮಾಡಲಾಗುತ್ತದೆ ಎಂಬ ಗೊಂದಲ ಎಲ್ಲೆಡೆ ಹಬ್ಬಿದೆ. ಶೇ.7.5ರಷ್ಟು ನಿರುದ್ಯೋಗ ಸಮಸ್ಯೆ ಇದೆ ಎಂದು ಕೇಂದ್ರ ವಿತ್ತ ನಿರ್ವಹಣಾ ಸಂಸ್ಥೆ ತಿಳಿಸಿದೆ. ಜಿಡಿಪಿ ಶೇ.4.5ರಷ್ಟಿದ್ದು, ಇದು ಕಳೆದ ಆರು ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಜಿಡಿಪಿ ದರವಾಗಿದೆ.

ಪಬ್ಲಿಕ್ ಸೆಕ್ಟರ್ ಬ್ಯಾಂಕ್ ಗಳ ಅಂಕಿ-ಅಂಶದ ಪ್ರಕಾರ, 2016-17ರಿಂದ ಮಾರ್ಚ್ 2019ರವರೆಗೆ ಶೈಕ್ಷಣಿಕ ಸಾಲದ ಮೊತ್ತ 67,685.59 ಕೋಟಿಯಿಂದ 75,450.68 ಕೋಟಿ ರೂಪಾಯಿಗೆ ಏರಿದೆ ಎಂದು ತಿಳಿಸಿದೆ. ಉದ್ಯೋಗದ ಭದ್ರತೆ ಮೇಲೆ ಶಿಕ್ಷಣ ಸಾಲವನ್ನು ನೀಡಲಾಗಿದೆ. ಈವರೆಗೂ ಶಿಕ್ಷಣ ಸಾಲವನ್ನು ಕಟ್ಟಲು ಸಾಧ್ಯವಾಗದೆ ಯಾವುದೇ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿಲ್ಲ ಎಂದು ಪಿಎಸ್ ಬಿ (ಪಬ್ಲಿಕ್ ಸೆಕ್ಟರ್ ಬ್ಯಾಂಕ್ಸ್) ವರದಿ ತಿಳಿಸಿದೆ.

ಶೈಕ್ಷಣಿಕ ಸಾಲ ಮನ್ನಾ ಮಾಡಬೇಕೆಂಬ ಯಾವುದೇ ಪ್ರಸ್ತಾಪ ಕೇಂದ್ರದ ಮುಂದೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಗೆ ನೀಡಿದ ಉತ್ತರದಲ್ಲಿ ಸ್ಪಷ್ಟಪಡಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ