
11.44 ಲಕ್ಷ ನಕಲಿ, ಡುಪ್ಲಿಕೇಟ್ ಪಾನ್ ಕಾರ್ಡ್ ಪತ್ತೆ: ಅನೂರ್ಜಿತ
Team Udayavani, Aug 2, 2017, 7:39 PM IST

ಹೊಸದಿಲ್ಲಿ : ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಅಕ್ರಮವಾಗಿ ಪಡೆದುಕೊಂಡಿರುವ ಸುಮಾರು 11.44 ಲಕ್ಷ ಪಾನ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಇಲ್ಲವೇ ರದ್ದು ಮಾಡಲಾಗಿದೆ.
ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ನಂಬರ್ ಜೋಡಿಸುವುದನ್ನು ಸರಕಾರ ಕಡ್ಡಾಯ ಮಾಡಿದ ಬಳಿಕದಲ್ಲಿ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಅಕ್ರಮವಾಗಿ ಹೊಂದಿರುವ 11 ಲಕ್ಷಕ್ಕೂ ಮೀರಿದ ಪಾನ್ ಕಾರ್ಡ್‌ಗಳು ಈ ತನಕ ಪತ್ತೆಯಾಗಿವೆ.
ಈ ವಿಷಯವನ್ನು ಇಂದು ಬುಧವಾರ ಕೇಂದ್ರ ಸಹಾಯಕ ಹಣಕಾಸುಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಅವರು ರಾಜ್ಯಸಭೆಗೆ ನೀಡಿದ ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ.
2017ರ ಜುಲೈ 27ರ ವರೆಗೆ 11,44,211 ಅಕ್ರಮ ಪಾನ್ ಕಾರ್ಡ್‌ಗಳು ಪತ್ತೆಯಾಗಿದ್ದು ಅವುಗಳನ್ನು ನಿಷ್ಕ್ರಿಯ ಗೊಳಿಸಲಾಗಿದೆ ಅಥವಾ ರದ್ದು ಮಾಡಲಾಗಿದೆ ಎಂದು ಸಚಿವರು ಹೇಳಿದರು.
ಒಬ್ಬ ವ್ಯಕ್ತಿ ಒಂದೇ ಪಾನ್ ಕಾರ್ಡ್ ಹೊಂದಿರಬೇಕಾಗಿದ್ದು ಅದರ ಅಡಿ ಆತನು ತನ್ನ ಎಲ್ಲ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ನಮೂದಿಸಿ ವರ್ಷಂಪ್ರತಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸಬೇಕಾಗುತ್ತದೆ. ಒಬ್ಬನೇ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹೊಂದುವುದು ಕಾನೂನು ಪ್ರಕಾರ ದುರುದ್ದೇಶದ ಅಪರಾಧವಾಗುತ್ತದೆ.
“ಜುಲೈ 27ರ ವರೆಗೆ 1,566 ನಕಲಿ ಪಾನ್ ಕಾರ್ಡ್‌ಗಳನ್ನು ಪತ್ತೆ ಹಚ್ಚಲಾಗಿದೆ; ಇಂತಹ ಕಾರ್ಡುಗಳನ್ನು ಅಸ್ತಿತ್ವದಲ್ಲೇ ಇರದ ವ್ಯಕ್ತಿಗಳ ಹೆಸರಲ್ಲಿ ಅಥವಾ ಸುಳ್ಳು ಗುರುತಿನ ವ್ಯಕ್ತಿಗಳ ಹೆಸರಿನಲ್ಲಿ ಮೋಸದಿಂದ ಪಡೆಯಲಾಗಿತ್ತು ಎಂದು ಸಚಿವರು ಹೇಳಿದರು.
2016ರ ನವೆಂಬರ್‌ನಿಂದ 2017ರ ಮಾರ್ಚ್ ವರೆಗಿನ ಅವಧಿಯಲ್ಲಿ ಆದಾಯ ತೆರಿಗೆ ಇಲಾಖೆ 900 ವ್ಯಕ್ತಿ-ಸಮೂಹಗಳನ್ನು ಶೋಧಿಸಿದ್ದು ಆ ಪ್ರಕಾರ 900 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ ಮತ್ತು ಬಹಿರಂಗಪಡಿಸದ 7,961 ಕೋಟಿ ರೂ. ಆದಾಯವನ್ನು ಘೋಷಿಸಿಕೊಳ್ಳುವಂತೆ ಮಾಡಲಾಗಿದೆ ಎಂದು ಸಚಿವ ಗಂಗ್ವಾರ್ ಹೇಳಿದರು.
ಇದೇ ರೀತಿ 8,239 ಸಮೀಕ್ಷೆಗಳನ್ನು ನಡೆಸಲಾಗಿ 6,745 ಕೋಟಿ ರೂ.ಗಳ ಅಘೋಷಿತ ಆದಾಯವನ್ನು ಪತ್ತೆ ಹಚ್ಚಲಾಗಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಬೈಬಲ್ಗೆ ಬೆಂಕಿ ಹಚ್ಚಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರಗೈದ ಆರೋಪಿಯ ಬಂಧನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

ಗಂಗೊಳ್ಳಿ: ಸ್ಕೀಮ್ ಹೆಸರಿನಲ್ಲಿ ಗ್ರಾಹಕರಿಗೆ ಕೋಟ್ಯಂತರ ರೂ. ವಂಚನೆ

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್