ಮೇ 1 ರಿಂದ ರಿಲಯನ್ಸ್ ಉದ್ಯೋಗಿಗಳಿಗೆ, ಕುಟುಂಬದವರಿಗೆ ಉಚಿತ ಕೋವಿಡ್ ಲಸಿಕೆ
Team Udayavani, Apr 28, 2021, 3:23 PM IST
ನವ ದೆಹಲಿ : ಕೋವಿಡ್ ಬಿಕ್ಕಟ್ಟಿನ ಎರಡನೇ ಅಲೆ ದೇಶದಲ್ಲಿ ತೀವ್ರವಾಗಿ ಹಬ್ಬುತ್ತಿರುವ ಸಂದರ್ಭದಲ್ಲಿ ಲಸಿಕೆ ಅಭಿಯಾನವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲು ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತಿದ್ದು, ಮೇ1ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲಾ ಲಸಿಕೆ ನೀಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ಲಸಿಕೆ ಉತ್ಪಾದಕರಿಂದ ಕೊರೋನಾ ಖರೀದಿಸಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತಿದೆ.
ಈ ನಡುವೆ ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆ ದೇಶದ ಎಲ್ಲಾ ಭಾಗಗಳಲ್ಲಿರುವ ತನ್ನ ಉದ್ಯೋಗಿಗಳಿಗೆ ಮತ್ತು ಉದ್ಯೋಗಿಗಳ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರಿಗೆ ಮೇ 1 ರಿಂದ ಕೋವಿಡ್ ಲಸಿಕೆಯನ್ನು ನೀಡುವ ಆರ್-ಸುರಕ್ಷಾ ಅಭಿಯಾನವನ್ನು ಕೈಗೊಂಡಿದೆ.
ಓದಿ : ಕೋವಿಡ್ ಹಿನ್ನೆಲೆ : 3 ದಿನ ಲಾಕ್ ಡೌನ್ ಘೋಷಿಸಿದ ಗೋವಾ ಸರ್ಕಾರ
ಈ ಬಗ್ಗೆ ಪ್ರತಿಕ್ರಿಯಿಸಿದ ರಿಲಯನ್ಸ್ ಕಂಪೆನಿ, ಕೋವಿಡ್ ಸೋಂಕಿನಿಂದ ನಮ್ಮ ಉದ್ಯೋಗಿಗಳನ್ನು ರಕ್ಷಿಸುವುದು ನಮ್ಮ ಉದ್ದೆಶವಾಗಿದೆ. ಈ ಮೂಲಕ ಸಂಸ್ಥೆಯ ಪ್ರತಿಯೊಬ್ಬ ಉದ್ಯೋಗಿಯೂ ಮತ್ತು ಅವರ ಕುಟುಂಬದ 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಂಡು ಕೋವಿಡ್ ಸೋಂಕಿನಿಂದ ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದೆ.
ಇನ್ನು, ಕೋವಿಡ್ ಲಸಿಕೆ ಅಭಿಯಾನವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮೇ1ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲಾ ಲಸಿಕೆ ನೀಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ಲಸಿಕೆ ಉತ್ಪಾದಕರಿಂದ ಕೋವಿಡ್ ಲಸಿಕೆಗಳನ್ನು ಖರೀದಿಸಲು ಕೇಂದ್ರ ಸರ್ಕಾರ ಅನುಮತಿಸಿದೆ.
ಓದಿ : ಪ್ರವಾಸಿಗರಿಗೆ ನಿರಾಸೆ: ಏ.29ರಿಂದ ಗೋವಾದಲ್ಲಿ ಲಾಕ್ ಡೌನ್ ಜಾರಿ: ಸಿಎಂ ಸಾವಂತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ