ಚೀನ ರೇಷ್ಮೆಗೆ ಕಡಿವಾಣ, ರೈತರಿಗೆ ವರ?

Team Udayavani, Jul 24, 2020, 6:37 AM IST

ಚೀನ ರೇಷ್ಮೆಗೆ ಕಡಿವಾಣ, ರೈತರಿಗೆ ವರ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಭಾರತ-ಚೀನ ಸಂಘರ್ಷದ ಹಿನ್ನೆಲೆಯಲ್ಲಿ ಅಲ್ಲಿಂದ ಆಮದಾಗುವ ರೇಷ್ಮೆಗೆ ನಿಗದಿತ ಅವಧಿಗೆ ನಿಷೇಧ ಹೇರುವ ಅಥವಾ ಆಮದು ಸುಂಕ ಹೆಚ್ಚಳಕ್ಕೆ ಕೇಂದ್ರ ಸರಕಾರ ಗಂಭೀರ ಚಿಂತನೆ ನಡೆ ಸಿದೆ.
ಇದು ಮುಂದಿನ‌ ದಿನಗಳಲ್ಲಿ ರಾಜ್ಯದ ರೇಷ್ಮೆ ಬೆಳೆಗಾರರಿಗೆ ವರವಾಗುವ ಸಾಧ್ಯತೆ ಇದೆ.
ಚೀನ ಆ್ಯಪ್‌ ಮತ್ತಿತರ ಉತ್ಪನ್ನ ಗಳಿಗೆ ನಿಷೇಧ ವಿಧಿಸಿದಂತೆ ರೇಷ್ಮೆ ಆಮದು ಕೂಡ ನಿಷೇಧಿಸಬೇಕು. ಇದರಿಂದ ಬೆಳೆಗಾರರು ಮತ್ತು ಸ್ಥಳೀಯ ರೇಷ್ಮೆ ಮಾರುಕಟ್ಟೆಗೆ ಅನುಕೂಲ ಆಗಲಿದೆ ಎಂದು ಕರ್ನಾಟಕವು ಕೇಂದ್ರಕ್ಕೆ ಈಚೆಗೆ ಪತ್ರ ಬರೆದಿದೆ.
ರೇಷ್ಮೆ ಬೆಳೆಯುವ ಇತರ ರಾಜ್ಯಗಳಿಂದಲೂ ಒತ್ತಡ ಬಂದಿದ್ದು, ಈ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎನ್ನಲಾಗಿದೆ.
ನಿಷೇಧ ಕಷ್ಟ ; ನಿರ್ಬಂಧ ಸಾಧ್ಯ
ವಿಶ್ವ ವ್ಯಾಪಾರ ಸಂಸ್ಥೆ (WTO) ನಿಯಮ ಪ್ರಕಾರ ಏಕಾಏಕಿ ಆಮದು ನಿಷೇಧಿಸಲಾಗದು. ಆದರೆ ಕೋವಿಡ್ 19ನಿಂದಾಗಿ ಎಲ್ಲ ವಹಿವಾಟು ಸ್ಥಗಿತಗೊಂಡಿದ್ದು, ರೇಷ್ಮೆ ಮಗ್ಗಗಳು ಮತ್ತು ಅವಲಂಬಿತ ಕೈಗಾರಿಕೆಗಳು ಸ್ಥಗಿತಗೊಂಡಿವೆ. ಹೀಗಾಗಿ ಮೂರ್‍ನಾಲ್ಕು ತಿಂಗಳಿಂದ ಕಚ್ಚಾ ರೇಷ್ಮೆ ದಾಸ್ತಾನು ಆಗಿದೆ.
ಈ ಹಿನ್ನೆಲೆಯಲ್ಲಿ ಚೀನ ರೇಷ್ಮೆ ಮೇಲೆ ನಿಗದಿತ ಅವಧಿಗೆ ನಿರ್ಬಂಧ ವಿಧಿಸುವುದು ಅಥವಾ ಆಮದು ಸುಂಕವನ್ನು ಗರಿಷ್ಠ ಶೇ. 25ರವರೆಗೆ ಹೆಚ್ಚಿಸಲು ಅವಕಾಶ ಇದೆ ಎನ್ನಲಾಗಿದೆ.
ಇದು ಸಾಧ್ಯವಾದರೆ ಸ್ಥಳೀಯ ರೇಷ್ಮೆಗೆ ಬೇಡಿಕೆ ಬರಲಿದೆ. ಆಗ ಪ್ರಸ್ತುತ ಸಂಕಷ್ಟಕ್ಕೆ ಸಿಲುಕಿರುವ ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಣಿಕೆದಾರರಿಗೆ ಸಾಕಷ್ಟು ಅನುಕೂಲ ಆಗಲಿದೆ.

3 ಸಾವಿರ ಮೆ. ಟನ್‌ ಆಮದು
ದೇಶಾದ್ಯಂತ ವಾರ್ಷಿಕ ಸರಿ ಸುಮಾರು 35 ಸಾವಿರ ಮೆ. ಟನ್‌ ರೇಷ್ಮೆ ಉತ್ಪಾದನೆಯಾಗುತ್ತಿದ್ದು, ಇದರಲ್ಲಿ ರಾಜ್ಯದ ಪಾಲು ಶೇ. 50ಕ್ಕಿಂತ ಹೆಚ್ಚು. 2ರಿಂದ 3 ಸಾವಿರ ಮೆ. ಟನ್‌ ಚೀನದಿಂದ ಆಮದು ಆಗುತ್ತಿದೆ. ಇದೇ ಗುಣಮಟ್ಟದ ಕಚ್ಚಾ ರೇಷ್ಮೆ ರಾಜ್ಯದಲ್ಲೂ ಉತ್ಪಾದನೆ ಆಗುತ್ತಿದೆ. ಆದರೆ ಬೇಡಿಕೆಯಷ್ಟು ಪೂರೈಕೆ ಆಗುತ್ತಿಲ್ಲ. ಇದಲ್ಲದೆ ದೇಶೀಯವಾಗಿ ಸ್ವಯಂಚಾಲಿತ ರೀಲಿಂಗ್‌ ಯಂತ್ರ ತಯಾರಿಸುವ ಪ್ರಯತ್ನವೂ ನಡೆದಿದೆ ಎಂದು ಕೇಂದ್ರೀಯ ರೇಷ್ಮೆ ಮಂಡಳಿ ಮೂಲಗಳು ‘ಉದಯವಾಣಿ’ಗೆ ಸ್ಪಷ್ಟಪಡಿಸಿವೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.