ದೇಶದಲ್ಲಿ ಕ್ರೆಡಿಟ್ ಕಾರ್ಡ್, ಯುಪಿಐ ವ್ಯವಹಾರ ಏರಿಕೆ
Team Udayavani, Sep 12, 2022, 7:23 AM IST
ಹೊಸದಿಲ್ಲಿ: ದೇಶದಲ್ಲಿ ಕ್ರೆಡಿಟ್ ಕಾರ್ಡ್ ಮತ್ತು ಯುಪಿಐ ಮೂಲಕ ಪಾವತಿ ಹೆಚ್ಚುತ್ತಿದ್ದು, ಗ್ರಾಹಕರ ಖರೀದಿ ವ್ಯವಹಾರ ವೃದ್ಧಿಯ ಸೂಚನೆಯಾಗಿದೆ.
ಕೋವಿಡ್ ಕಾಲದ ಹಿಂಜರಿತವನ್ನು ಹಿಮ್ಮೆಟ್ಟಿಸಿ ಆರ್ಥಿಕ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿರುವುದು ಇದರಿಂದ ಸಾಬೀತಾಗಿದೆ ಎಂದು ವಿತ್ತ ತಜ್ಞರು ವಿಶ್ಲೇಷಿಸಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ನ ಮಾಸಿಕ ಅಂಕಿಅಂಶಗಳ ಪ್ರಕಾರ ಗೂಗಲ್ ಪೇ, ಫೋನ್ಪೇಯಂತಹ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಮೂಲಕ ಈ ವರ್ಷದ ಎಪ್ರಿಲ್ನಲ್ಲಿ 9.83 ಲಕ್ಷ ಕೋಟಿ ರೂ. ವ್ಯವಹಾರ ನಡೆದಿದ್ದರೆ ಆಗಸ್ಟ್ನಲ್ಲಿ ಇದು 10.73 ಲಕ್ಷ ಕೋಟಿ ರೂ.ಗಳಿಗೆ ಏರಿದೆ.
ಹಾಗೆಯೇ ಪಿಒಎಸ್ (ಪಾಯಿಂಟ್ ಆಫ್ ಸೇಲ್) ಕ್ರೆಡಿಟ್ ಕಾರ್ಡ್ ಪಾವತಿಗಳು ಎಪ್ರಿಲ್ನಲ್ಲಿ 29,988 ಕೋಟಿ ರೂ.ಗಳಾಗಿದ್ದರೆ ಆಗಸ್ಟ್ನಲ್ಲಿ 32,383 ಕೋಟಿ ರೂ.ಗಳಿಗೆ ಹೆಚ್ಚಿದೆ. ಇ-ಕಾಮರ್ಸ್ ವೇದಿಕೆಗಳ ಮೂಲಕ ಎಪ್ರಿಲ್ನಲ್ಲಿ 51,375 ಕೋ.ರೂ. ಕ್ರೆಡಿಟ್ ಕಾರ್ಡ್ ಪಾವತಿಗಳು ನಡೆದಿದ್ದರೆ ಆಗಸ್ಟ್ನಲ್ಲಿ ಇದು 55,264 ಕೋ.ರೂ.ಗಳಿಗೆ ಏರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್