ಪಾಕ್ ಕ್ಯಾತೆ; 5ಗಂಟೆ ವಿಳಂಬದ ಬಳಿಕ ದೆಹಲಿ ತಲುಪಿದ ಸಂಜೋತಾ ಎಕ್ಸ್ ಪ್ರೆಸ್ ರೈಲು

Team Udayavani, Aug 9, 2019, 10:09 AM IST

ನವದೆಹಲಿ:ಎರಡೂ ದೇಶಗಳ ನಡುವೆ ಸಂಚರಿಸುತ್ತಿದ್ದ ಸಂಜೋತಾ ಎಕ್ಸ್ ಪ್ರೆಸ್ ರೈಲು ಸಂಚಾರದ ಸೇವೆ ಸ್ಥಗಿತಗೊಳಿಸಿರುವುದಾಗಿ ಗುರುವಾರ ಪಾಕ್ ರೈಲ್ವೆ ಸಚಿವ ಶೇಖ್ ರಶೀದ್ ಅಹ್ಮದ್ ಘೋಷಿಸಿದ್ದ ಹಿನ್ನೆಲೆಯಲ್ಲಿ ವಾಘಾ ಗಡಿಯಲ್ಲೇ ನಿಲ್ಲಿಸಲಾಗಿದ್ದ ಸಂಜೋತಾ ಎಕ್ಸ್ ಪ್ರೆಸ್ ರೈಲು ಸುಮಾರು 5ಗಂಟೆಗಳ ವಿಳಂಬದ ನಂತರ ಶುಕ್ರವಾರ ಬೆಳಗ್ಗೆ ದೆಹಲಿ ತಲುಪಿದೆ.

ಸಂಜೋತಾ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಸ್ಥಗಿತಗೊಳಿಸಲು ನಾವು ನಿರ್ಧರಿಸಿದ್ದೇವೆ ಎಂದು ರೈಲ್ವೆ ಸಚಿವ ಶೇಖ್ ರಶೀದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದ ಬೆನ್ನಲ್ಲೇ ಸಂಜೋತಾ ಎಕ್ಸ್ ಪ್ರೆಸ್ ರೈಲನ್ನು ಗುರುವಾರ ವಾಘಾ ಗಡಿಯಲ್ಲೇ ನಿಲ್ಲಿಸಲಾಗಿತ್ತು. ಅದರಲ್ಲಿದ್ದ ಸಿಬ್ಬಂದಿಯು ಭದ್ರತೆಯ ಕಾರಣ ಹೇಳಿ ಮುಂದೆ ಸಾಗಲು ನಿರಾಕರಿಸಿದ್ದರು. ಬಳಿಕ ಭಾರತೀಯ ನೌಕರ ಮತ್ತು ಭದ್ರತಾ ಸಿಬ್ಬಂದಿಯು ಅಟ್ಟಾರಿಯವರೆಗೆ ರೈಲಿಗೆ ಭದ್ರತೆ ಒದಗಿಸಿದ್ದರು.

 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚರ್ಯರ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ